ಮೂಟೇರಿ ಉಮಾಮಹೇಶ್ವರಿ ದೇವರ ವಾರ್ಷಿಕ ಉತ್ಸವ

17-npk-1.
ನಾಪೋಕ್ಲು ಸಮೀಪದ ಮೂಟೇರಿಯಲ್ಲಿ ಉಮಾಮಹೇಶ್ವರಿ ದೇವರ ಉತ್ಸವ ವಿಜೃಂಭಣೆಯಿಂದ ಜರುಗಿತು.
Published on

ನಾಪೋಕ್ಲು: ಕೊಳಕೇರಿ ಗ್ರಾಮದ ಮೂಟೇರಿ ಉಮಾಮಹೇಶ್ವರಿ ದೇವರ ವಾರ್ಷಿಕ ಉತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಿಂದ ಸಂಪನ್ನಗೊಂಡಿತು. ಉತ್ಸವದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಪೂಜೆ, ಅಲಂಕಾರ ಪೂಜೆ ಮಹಾಮಂಗಳಾರತಿ ನಂತರ ತೀರ್ಥ, ಪ್ರಸಾದ ವಿತರಣೆ ನೆರವೇರಿಸಲಾಯಿತು. ಪಟ್ಟಣಿ ಹಬ್ಬದಂದು ಭಕ್ತರು ದೇವಾಲಯದಲ್ಲಿ ದೇವರ ಪ್ರದರ್ಶನ ನೃತ್ಯ ಬಲಿಯನ್ನು ವೀಕ್ಷಿಸಿ ಕಣ್ತುಂಬಿಕೊಂಡು ತಮ್ಮ ಇಷ್ಟಾರ್ಥ ಈಡೇರಿಕೆಗೆ ಹರಕೆ ಕಾಣಿಕೆ ಒಪ್ಪಿಸಿ ಪ್ರಸಾದವನ್ನು ಸ್ವೀಕರಿಸಿದರು. ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ, ತಕ್ಕ ಮುಖ್ಯಸ್ಥರು ಹಾಗೂ ಭಕ್ತರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net