7ರಂದು ಸುಂಟಿಕೊಪ್ಪ ಗ್ರಾಮ ದೇವರ ವಾರ್ಷಿಕ ಪೂಜೆ

Published on

ಸುಂಟಿಕೊಪ್ಪ: ಇಲ್ಲಿನ ಗ್ರಾಮ ದೇವರ 6ನೇ ವರ್ಷದ ವಾರ್ಷಿಕ ಪೂಜೆಯು ಮಾ.7 ರಂದು ನಡೆಯಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನ ಆಡಳಿತ ಮಂಡಳಿ ಕೋರಿದೆ.

ಪಟ್ಟಣದ ಎರಡನೇ ವಿಭಾಗದಲ್ಲಿರುವ ಗ್ರಾಮದೇವರ ಬನದಲ್ಲಿ 6ನೇ ವರ್ಷದ ವಾರ್ಷಿಕ ಮಹೋತ್ಸವದ ಅಂಗವಾಗಿ ಸುಂಟಿಕೊಪ್ಪದ ವಿವಿಧ ದೇವಾಲಯಗಳಾದ ಶ್ರೀ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಸ್ಥಾನ ಸಮಿತಿ, ಶ್ರೀ ರಾಮ ಸೇವಾ ಸಮಿತಿ, ಶ್ರೀ ಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ಸಮಿತಿ, ಶ್ರೀ ಗೌರಿಗಣೇಶೋತ್ಸವ ಸಮಿತಿ, ಶ್ರೀ ಮಸಣಿಕಮ್ಮ ದೇವಸ್ಥಾನ ಸಮಿತಿ, ವೃಕ್ಷೋದ್ಭವ ಶ್ರೀ ಮಹಾಗಣಪತಿ ದೇವಾಲಯ ಸಮಿತಿ ಮದುರಮ್ಮ ಬಡಾವಣೆ, ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಸಮಿತಿ ಟಿಸಿಎಲ್, ಶ್ರೀ ಅಣ್ಣಪ್ಪ ದೇವಸ್ಥಾನ ಸಮಿತಿ ಶ್ರೀದೇವಿ, ಶ್ರೀ ಚಾಮುಂಡೇಶ್ವರಿ, ಶ್ರೀ ಮುತ್ತಪ್ಪ ಸೇವಾ ಸಮಿತಿ ಬಾಲೆಕಾಡು, ಶ್ರೀ ಕೊಡಂಗಲ್ಲೂರು ಕುರುಂಬ ಭಗವತಿ ದೇವಾಲಯ ಗದ್ದೆಹಳ್ಳ, ಶ್ರೀ ನಾಗದೇವತೆ ದೇವಸ್ಥಾನ ಮದುರಮ್ಮ ಬಡಾವಣೆ, ಶ್ರೀ ಮಳೂರು ಬೆಳ್ಳಾರಿಕಮ್ಮ ದೇವಾಲಯ ಸಮಿತಿ, ಶ್ರೀ ಬಸವೇಶ್ವರ ದೇವಾಲಯ ಸಮಿತಿ ಗದ್ದೆಹಳ್ಳ ಸಹಭಾಗಿತ್ವದಲ್ಲಿ ನಡೆಯಲಿದೆ. ಮಾ.7 ರಂದು ಸ್ಥಳ ಶುದ್ಧಿ ಕಲಶ ಬೆಳಗ್ಗೆ 7.30 ರಿಂದ 8.30 ರವರೆಗೆ, 9 ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ. 9 ರಿಂದ 10 ಗಂಟೆಯವರೆಗೆ ಹರಕೆ ಸಮರ್ಪಣೆ, ಮಧ್ಯಾಹ್ನ 1.30 ರಿಂದ 3.30 ರವರೆಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಎ.ಶ್ರೀಧರ್‌ಕುಮಾರ್ ಮತ್ತು ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net