

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸೋಮವಾರ (12) ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ. ಎನ್‌ಸಿಎಸ್ ಪ್ರಕಾರ, ಭೂಕಂಪವು 10 ಕಿ.ಮೀ ಆಳದಲ್ಲಿ ಸಂಭವಿಸಿದ್ದು, ಮುಂದಿನ ಆಘಾತಗಳಿಗೆ ಗುರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇಂದು ಮಧ್ಯಾಹ್ನ 1:26 ರ ಸುಮಾರಿಗೆ ಪಾಕಿಸ್ತಾನದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಪಾಕಿಸ್ತಾನವು ವಿಶ್ವದ ಅತ್ಯಂತ ಭೂಕಂಪನಶೀಲ ದೇಶಗಳಲ್ಲಿ ಒಂದಾಗಿದೆ. ಪಾಕಿಸ್ತಾನದಲ್ಲಿ ಭೂಕಂಪಗಳು ಆಗಾಗ್ಗೆ ಸಂಭವಿಸುತ್ತದೆ. ಇದಕ್ಕೂ ಮುನ್ನ ಮೇ 10ರಂದು 4.6 ತೀವ್ರತೆಯಲ್ಲಿ ಭೂಕಂಪ ಸಂಭವಿಸಿತ್ತು.
ಶುಕ್ರವಾರ-ಶನಿವಾರದ ಮಧ್ಯರಾತ್ರಿ ಪಾಕಿಸ್ತಾನದಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದ ಬಳಿಕ ಮತ್ತೆ ಈ ಭೂಕಂಪ ಸಂಭವಿಸಿದೆ.