ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮತ್ತೊಬ್ಬ ಆರೋಪಿ ಅರೆಸ್ಟ್!​​ Ramya

Actress Ramya
Published on

ಬೆಂಗಳೂರು: ನಟಿ ರಮ್ಯಾಗೆ (Ramya) ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಪ್ರಕರಣದಲ್ಲಿ ಸೈಬರ್ ಕ್ರೈಮ್ ಪೊಲೀಸರು ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೆ.ಆರ್.ಪುರದ ನಿವಾಸಿಯಾದ ‌ಪ್ರಕರಣದ A1 ಆರೋಪಿ ಪ್ರಮೋದ್ ಗೌಡ ಪೊಲೀಸರ ಅತಿಥಿಯಾಗಿದ್ದಾನೆ.

.ನಟಿ​ ರಮ್ಯಾ ಅವರು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ರಮ್ಯಾ ಟ್ವೀಟ್​ ಮಾಡಿದ್ದರು. ರಮ್ಯಾ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಹೇಳಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ಟ್ರೋಲ್ ಮಾಡಲು ಶುರು ಮಾಡಿದ್ದರು.

ಈತ ತನ್ನ ಸ್ನೇಹಿತನ ಮೊಬೈಲ್ ನಲ್ಲಿ ಅಕೌಂಟ್ ಓಪನ್ ಮಾಡಿ ಮೆಸೇಜ್​ ಮಾಡುತ್ತಿದ್ದ ಎನ್ನಲಾಗಿದೆ. ಪ್ರಮೋದ್ ಗೌಡ- 87 (Pramod Gowda) ಎಂಬ ಅಕೌಂಟ್​ನಿಂದ ಆತನೆ ಮೆಸೇಜ್ ಮಾಡಿದ್ದರಿಂದ ಆತನನ್ನು ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಭುವನ್‌ಗೌಡ, ರಾಜೇಶ್, ಟಿ.ಓಬಣ್ಣ, ಗಂಗಾಧರ ಹಾಗೂ ಕೊಪ್ಪಳದ ಮಂಜುನಾಥ್‌ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಒಟ್ಟು ಆರು ಜನ ಪೊಲೀಸರ ಅತಿಥಿಯಾಗಿದ್ದಾರೆ.

(ಏಜೆನ್ಸೀಸ್)

43 ಖಾತೆಗಳಿಂದ ಬೆದರಿಕೆ ಸಂದೇಶಗಳು ಬಂದಿರುವುದಾಗಿ ಉಲ್ಲೇಖಿಸಿ ರಮ್ಯಾ ಅವರು ದೂರು ನೀಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಮ್ಯಾ ಅವರು ಜುಲೈ 28ರಂದು ನಗರ ಪೊಲೀಸ್‌ ಕಮಿಷನರ್‌ ಸೀಮಂತ್‌ ಕುಮಾರ್ ಸಿಂಗ್‌ ಅವರ ಬಳಿ ದೂರು ದಾಖಲಿಸಿದ್ದರು. ಆ ದೂರು ಆಧರಿಸಿ ಸೈಬರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net