

ಮಂಗಳೂರು: ಕರೊನಾ ವೈರಸ್ನಿಂದ ಮಂಗಳೂರಿನಲ್ಲಿ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಈ ವ್ಯಕ್ತಿ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
40 ವರ್ಷ ವಯಸ್ಸಿನ ಇವರು ವೇಣೂರಿನಲ್ಲಿ ಸಿಮೆಂಟ್ ಅಂಗಡಿಯ ಗೂಡ್ಸ್ ರಿಕ್ಷಾ ಚಾಲಕರಾಗಿದ್ದರು. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯಲು ಶನಿವಾರ ರಾತ್ರಿ ವೆನ್ಲಾಕ್ ಆಸ್ಪತ್ರೆಗೆ ಆಗಮಿಸಿದ್ದರು. ಅಂದೇ ರಾತ್ರಿ ಮೃತಪಟ್ಟಿದ್ದರು.
ಇವರ ಸಾವಿನ ಬಳಿಕ ಮೃತದೇಹಕ್ಕೆ ಕರೊನಾ ಟೆಸ್ಟ್ ಮಾಡಲಾಗಿತ್ತು. ಅದರ ವರದಿಯೀಗ ಬಂದಿದ್ದು, ಕೊವಿಡ್-19 ಪಾಸಿಟಿವ್ ಆಗಿದೆ. ಈ ವ್ಯಕ್ತಿಯ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಕರೊನಾಕ್ಕೆ ಮಂಗಳೂರಿನಲ್ಲಿಯೇ ಆರು ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 44ಕ್ಕೆ ಏರಿದೆ.
ಇದನ್ನೂ ಓದಿ: ಸೋಂಕಿಗೆ ಸೆನ್ಸ್ ಮಾಸ್ಕ್ ಶಾಕ್