

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಇದೀಗ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ರಾಜು ಅಲಿಯಾಸ್ ಧನರಾಜ್ ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿ ಧನ್ರಾಜ್ ಮೃತ ರೇಣುಕಸ್ವಾಮಿಗೆ ಮೆಗ್ಗರ್ ಡಿವೈಸ್ನಿಂದ ಕರೆಂಟ್ ಶಾಕ್ ಕೊಟ್ಟು ಚಿತ್ರಹಿಂಸೆ ನೀಡಿದ್ದ ಎಂದು ಹೇಳಲಾಗಿದೆ. ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 19 ಆರೋಪಿಗಳ ಬಂಧನವಾಗಿದೆ.