

ಹೈದರಾಬಾದ್: ಪುಷ್ಪ-2(Pushpa-2) ಚಿತ್ರ ಬಿಡುಗಡೆ ಆದಗಿನಿಂದ ಒಂದಿಲ್ಲೊಂದು ಸುದ್ದಿಯಲ್ಲಿದ್ದು, ಸಿನಿಮಾ ಪ್ರದರ್ಶನದ ವೇಳೆ ದುರುಂತಗಳು ನಡೆಯುತ್ತಲೆ ಇವೆ. ಕಾಕತಾಳೀಯ ಎಂಬಂತೆ ಇದೀಗ ಪ್ರದರ್ಶದ ಸಮಯಲ್ಲಿ ಮತ್ತೊಬ್ಬ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಇದೇ ಡಿ.05ರಂದು ಸೌತ್ ಇಂಡಿಯಾ ಫಿಲ್ಮ್ ಪುಷ್ಪ-2 ಸಿನಿಮಾ ದೇಶಾದ್ಯಂತ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅಲ್ಲದೆ, ಬಾಕ್ಸ್ ಆಫೀಸ್ನಲ್ಲಿ ಕೂಡ ಭರಪೂರ ಕಲೆಕ್ಷನ್ ಮಾಡುತ್ತಿದೆ ಎಂದು ವರದಿಯಾಗಿದೆ. ಆದರೆ, ದುಖಕರ ಸಂಗತಿ ಎಂದರೆ ಸಿನಿಮಾ ಪ್ರದರ್ಶನ ವೇಳೆ ಸಂಭಂವಿಸಿದ ದುರಂತದಲ್ಲಿ ಈಗಾಗಲೇ ಇಬ್ಬರು ಮೃತಪಟ್ಟಿದ್ದು, ಈಗ ಮತ್ತೊಂದು ಸೇರ್ಪಡೆಯಾಗಿದೆ.
ಅಲ್ಲು ಅರ್ಜುನ್ ಅಭಿಮಾನಿಯಾದ 35 ವರ್ಷದ ಯುವಕ ಮೃತಪಟ್ಟಿದ್ದಾರೆ. ಮ್ಯಾಟಿನ್ ಷೋ ಬಳಿಕ ದುರಂತ ಸಂಭಂವಿಸಿದೆ. ಕುಡಿದ ಅಮಲಿನಲ್ಲಿ ಬಂದ ವ್ಯಕ್ತಿ ಸಿನಿಮಾ ನೋಡುವುದಕ್ಕೆ ಬಂದಿದ್ದಾನೆ. ಕುರ್ಚಿ ಮೇಲೆ ಕುಳಿತ್ತಿದ್ದ ಕೆಳಗಡೆ ಮಲಗಿದ್ದಾನೆ. ನಿದ್ದೆಯಲ್ಲಿಯೇ ಮೃತ ಪಟ್ಟಿದ್ದಾನೆ. ಅಲ್ಲದೆ, ಇತ ಮದ್ಯವೆಸನದ ಇತಿಹಾಸ ಹೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಕಳೆದ ಡಿ. 05ರಂದು ಪ್ರೀಮಿಯರ್ ಶೋಗೆ ಬಂದಿದ್ದ ಅಲ್ಲು ಅರ್ಜುನ್ ಅವರನ್ನು ನೋಡಲು ಅಭಿಮಾನಿಗಳ ದಂಡೇ ನೆರೆದಿತ್ತು. ರಾತ್ರಿ 11 ಗಂಟೆಗೆ ಪುಷ್ಪ 2 ರ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಪ್ರೀಮಿಯರ್ ವೀಕ್ಷಿಸಲು ಅಲ್ಲು ಅರ್ಜುನ್ ಬರಲಿದ್ದಾರೆ ಎಂಬ ವಿಷಯ ತಿಳಿದ ಜನರು ತಂಡೋಪತಂಡವಾಗಿ ಥಿಯೇಟರ್‌ಗೆ ಆಗಮಿಸಿದ್ದರು. ಈ ವೇಳೆ ಉಂಟಾದ ಕಾಲ್ತುಳಿತದಲ್ಲಿ ರೇವತಿ ಸಾವಿಗೀಡಾಗಿದ್ದಾರೆ. ಅಲ್ಲದೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಭಿಮಾನಿಯೊಬ್ಬ ಸಿನಿಮಾ ನೋಡಲು ಹೊಗುತ್ತಿದ್ದಾಗ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಪುಷ್ಪ 2: ದಿ ರೂಲ್, 2021ರ ಬ್ಲಾಕ್‌ಬಸ್ಟರ್ ಪುಷ್ಪ: ದಿ ರೈಸ್‌ನ ಬಹು ನಿರೀಕ್ಷಿತ ಸಿನಿಮಾದ ಮುಂದಿನ ಭಾಗವಾಗಿದೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದು, ಸುಕುಮಾರ್ ನಿರ್ದೇಶನ ಮಾಡಿದ್ದಾರೆ. ಇಂದಿನಿಂದ ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. (ಏಜೆನ್ಸಿಸ್)