ಮತ್ತೆ ಕಿಶ್ತ್ವಾರ್‌ನಲ್ಲಿ ಗುಂಡಿನ ಚಕಮಕಿ; ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ವಶಕ್ಕೆ| Encounter

JK Encounter
Published on

ಭಾರತೀಯ ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು, ಬೆದರಿಕೆಯನ್ನು ತಟಸ್ಥಗೊಳಿಸುವ ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ.

ಕಿಶ್ತ್ವಾರ್: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಸಿಂಗ್‌ಪೋರಾ ಪ್ರದೇಶದಲ್ಲಿ ಇಂದು (22) ಬೆಳಗಿನ ಜಾವ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ವರದಿಗಳ ಪ್ರಕಾರ, ಸಿಂಗ್‌ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮೂರರಿಂದ ನಾಲ್ಕು ಭಯೋತ್ಪಾದಕರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ.

ಭಯೋತ್ಪಾದಕರೊಂದಿಗೆ ಸಂಪರ್ಕವನ್ನು ಸ್ಥಾಪಿಸಲಾಗಿದೆ ಮತ್ತು ಅವರನ್ನು ತಟಸ್ಥಗೊಳಿಸಲು ಕಾರ್ಯಾಚರಣೆಗಳು ಮುಂದುವರೆದಿವೆ ಎಂದು ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಒದಗಿಸಿದ ನಿಖರವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಮತ್ತು ಅರೆಸೈನಿಕ ಪಡೆಗಳನ್ನು ಒಳಗೊಂಡ ಜಂಟಿ ತಂಡವು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಎನ್‌ಕೌಂಟರ್ ಪ್ರಾರಂಭ ಮಾಡಲಾಗಿದೆ. ಇನ್ನೂ ಪ್ರಸ್ತುತ ಈ ಪ್ರದೇಶದಲ್ಲಿ ಮೂರರಿಂದ ನಾಲ್ಕು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎಂಬ ವರದಿಯಾಗಿದೆ.

(ಏಜೆನ್ಸೀಸ್)

ಸ್ಥಳೀಯ ಪೊಲೀಸರು ಮತ್ತು ಸೇನೆಯು ಜನರು ಈ ಪ್ರದೇಶಕ್ಕೆ ಅನಗತ್ಯವಾಗಿ ಬರಬೇಡಿ ಮತ್ತು ಭದ್ರತಾ ಪಡೆಗಳೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದೆ.

ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದ್ದು, ಸ್ಥಳೀಯ ಆಡಳಿತವು ನಿವಾಸಿಗಳು ಮನೆಯೊಳಗೆ ಇರುವಂತೆ ಮತ್ತು ಜಾಗರೂಕರಾಗಿರುವಂತೆ ಮನವಿ ಮಾಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದ್ದು, ಎನ್‌ಕೌಂಟರ್ ಸ್ಥಳಕ್ಕೆ ಹೋಗುವ ಎಲ್ಲಾ ಮಾರ್ಗಗಳನ್ನು ಬಂದ್​ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net