

ಸೊರಬ: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಹೆಚ್ಚಾಗಿದೆ. ಜನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ತಾಲೂಕು ಜೆಡಿಎಸ್ ಮುಖಂಡರು, ಕಾರ್ಯಕರ್ತರು ತಾಲೂಕು ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಮೂಲ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಕೆರೆಗಳ ನಿರ್ಮಾಣ, ಚರಂಡಿ ವ್ಯವಸ್ಥೆ ಸುಸ್ಥಿಯಲ್ಲಿಲ್ಲ. ಕ್ಷೇತ್ರವಾರು ಅನುದಾನ ನೀಡಲು ಸರ್ಕಾರ ಮೀನಮೇಷ ಎಣಿಸುತ್ತಿರುವುದನ್ನು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರೇ ಬಹಿರಂಗಗೊಳಿಸಿದ್ದಾರೆ. ಕಾರ್ಯವೈಖರಿಯನ್ನು ಬಹಿರಂಗವಾಗಿ ಟೀಕಿಸಿರುವುದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಹಿರಿಯ ಮುಖಂಡ ಬಾಸೂರು ಚಂದ್ರೇಗೌಡ ದೂರಿದರು.
ಆಶ್ರಯ ಯೋಜನೆಯಡಿ ವಿತರಿಸುವ ಮನೆಗಳಿಗೆ ಫಲಾನುಭವಿಗಳಿಂದ ಲಂಚ ಪಡೆಯುವ ಮೂಲಕ ಭ್ರಷ್ಟಾಚಾರಕ್ಕೆ ನಾಂದಿ ಹಾಡಿದೆ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಇದಕ್ಕೆ ಆರ್‌ಸಿಬಿ ತಂಡದ ವಿಜಯೋತ್ಸವದಲ್ಲಿ ಉಂಟಾದ ಕಾಲ್ತುಳಿತ ಘಟನೆಯೇ ಸಾಕ್ಷಿ. ಕೇವಲ ತುಷ್ಟೀಕರಣ ರಾಜಕಾರಣಕ್ಕೆ ಗಮನ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಜೆಡಿಸ್ ಅಧ್ಯಕ್ಷ ಗಣಪತಿ, ಟೌನ್ ಅಧ್ಯಕ್ಷ ಕುಮಾರ್, ಪ್ರಧಾನ ಕಾರ್ಯದರ್ಶಿ ಗಣೇಶ್, ಅಲ್ಪಸಂಖ್ಯಾತ ಘಟಕದ ಕಲ್ಮಿಯುಲ್ಲ ಖಾನ್, ರಾಜಶೇಖರ, ರಾಜಪ್ಪ ಇತರರಿದ್ದರು.