

ಬೆಂಗಳೂರು: ಕರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನುಮುಂದೆ ಮುಖ್ಯಮಂತ್ರಿ ಭೇಟಿ ತುಸು ಕಷ್ಟವಾಗಲಿದೆ. ಯಡಿಯೂರಪ್ಪನವರನ್ನು ಭೇಟಿ ಮಾಡಲು ಬರುವ ಸಾರ್ವಜನಿಕರು, ನಿಯೋಗಗಳ ಸದಸ್ಯರಿಗೆ ಆ್ಯಂಟಿಜೆನ್ ಪರೀಕ್ಷೆ ಕಡ್ಡಾಯವಾಗಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಮತ್ತು ಅಧಿಕೃತ ನಿವಾಸ ಕಾವೇರಿಯಲ್ಲಿ ಆ್ಯಂಟಿಜೆನ್ ತಪಾಸಣಾ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಭೇಟಿಗೆ ಬರುವವರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಲೇಬೇಕು. ಅದರಲ್ಲಿ ಪಾಸಿಟಿವ್ ಬಂದರೆ ಭೇಟಿಗೆ ಅವಕಾಶ ಇರುವುದಿಲ್ಲ. ಹಾಗೇ ಅಂಥವರನ್ನು ಆರ್ಟಿಪಿಸಿಎಆರ್ ತಪಾಸಣೆಗೆ ಒಳಪಡಿಸಲಾಗುತ್ತದೆ. ಅದರಲ್ಲೂ ಪಾಸಿಟಿವ್ ಬಂದವರನ್ನು ಆಸ್ಪತ್ರೆಗೆ ಕಳುಹಿಸುವ ಏರ್ಪಾಡು ಮಾಡಲಾಗಿದೆ.
ಆದರೆ, ಈ ನಿಯಮ ಸಿಎಂ ಭೇಟಿ ಮಾಡಲು ಬರುವ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಅಧಿಕಾರಿಗಳು ವಾರಕ್ಕೊಮ್ಮೆ ಕರೊನಾ ಪರೀಕ್ಷೆಗೆ ಒಳಪಡುವುದರಿಂದ ಅವರು ಪ್ರತಿ ದಿನ ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಲಾಗಿದೆ.