

ಆಂಧ್ರಪ್ರದೇಶ: ಟಾಲಿವುಡ್ನ ಮೆಗಾಸ್ಟಾರ್ ಚಿರಂಜೀವಿ ಚಿತ್ರದಲ್ಲಿ ಕರಾವಳಿ ಬೆಡಗಿ, ನಟಿ ಅನುಷ್ಕಾ ಶೆಟ್ಟಿ ಅಭಿನಯಿಸಲಿದ್ದಾರೆ ಎಂಬ ವರದಿ ಸದ್ಯ ತೆಲುಗು ಚಿತ್ರರಂಗದಲ್ಲಿ ವ್ಯಾಪಕವಾಗಿ ಕೇಳಿಬಂದಿದೆ.
ಇದೇ ಮೊದಲ ಬಾರಿಗೆ ಚಿರಂಜೀವಿ ಜತೆಗೆ ಅನುಷ್ಕಾ ಶೆಟ್ಟಿ ನಟಿಸಲಿದ್ದಾರೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಮೆಗಾಸ್ಟಾರ್ ಅವರ ಮುಂಬರುವ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಟಿ ನಿರ್ವಹಿಸಲಿದ್ದಾರೆ.
ಇತ್ತೀಚೆಗಷ್ಟೇ ಚಿರಂಜೀವಿ ನಟನೆಯ 'ಭೋಲಾ ಶಂಕರ್' ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು, ಸಿನಿಪ್ರೇಕ್ಷಕರಿಂದ ನಿರಸ ಪ್ರತಿಕ್ರಿಯೆ ಪಡೆದುಕೊಂಡಿತು. ಪ್ರದರ್ಶನದ ಜತೆಗೆ ಬಾಕ್ಸ್ ಆಫೀಸ್ನಲ್ಲಿ ಚಿತ್ರ ಕಮಾಲ್ ಮಾಡಲಿಲ್ಲ ಎಂಬ ಸಂಗತಿ ನಟನ ಅಭಿಮಾನಿಗಳಿಗೆ ಭಾರೀ ಬೇಸರ ಮೂಡಿಸಿತು. ಸದ್ಯ ಮುಂದಿನ ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಇದೀಗ ಕುತೂಹಲ ವ್ಯಕ್ತಪಡಿಸಿದ್ದಾರೆ.
ಚಿರಂಜೀವಿ ಮತ್ತು ಅನುಷ್ಕಾ ಶೆಟ್ಟಿ ಅಭಿನಯದ ಮುಂಬರುವ ಸಿನಿಮಾವನ್ನು 'ಬಿಂಬಿಸಾರ' ಖ್ಯಾತಿಯ ನಿರ್ದೇಶಕ ಮಲ್ಲಿಡಿ ವಸಿಷ್ಟ ನಿರ್ದೇಶಿಸುವ ಸಾಧ್ಯತೆಯಿದೆ,(ಏಜೆನ್ಸೀಸ್).