

ಶಿವಮೊಗ್ಗ: ನಗರದ ಆಲ್ಕೊಳದಲ್ಲಿರುವ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿಯಲ್ಲಿ ಏರ್ಪಡಿಸಿದ್ದ ಜೆಜೆ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ ಕುರಿತ ಜಾಗೃತಿ ಕಾರ್ಯಕ್ರಮವನ್ನು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ಅಪರ್ಣಾ ಎಂ.ಕೊಳ್ಳ ಉದ್ಘಾಟಿಸಿದರು.
ಶಿವಮೊಗ್ಗ ನಗರ ಹಾಗೂ ಗ್ರಾಮೀಣಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಶಾಲೆ ವಿದ್ಯಾರ್ಥಿಗಳು, ಮಕ್ಕಳ ಪಾಲನಾ ಸಂಸ್ಥೆಯ ಮಕ್ಕಳು ಹಾಗೂ ವಸತಿ ನಿಲಯದ 120 ಮಕ್ಕಳು ಭಾಗವಹಿಸಿದ್ದರು. ಜಿಲ್ಲೆಯಲ್ಲಿರುವ ಶಾಲೆ ಹಾಗೂ ವಸತಿ ಶಾಲೆಗಳಲ್ಲಿನ ಆಯ್ದ ವಿದ್ಯಾರ್ಥಿಗಳೊಂದಿಗೆ ಮಕ್ಕಳ ಜ್ವಲಂತ ಸಮಸ್ಯೆಗಳ ಕುರಿತು ಅಪರ್ಣಾ ಕೊಳ್ಳ ಸಂವಾದ ನಡೆಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಿ.ಎಚ್.ಕೃಷ್ಣಪ್ಪ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಂವಾದದಲ್ಲಿ ಭಾಗವಹಿಸಿದ್ದರು.