ರಸ್ತೆಗಳ ವಿಸ್ತರಣೆಗೆ ಆಗ್ರಹಿಸಿ ಪಾದಯಾತ್ರೆ ನಡೆಸಿ ಮನವಿ

6-KGL-4,,,,,,,,
ಕೊಳ್ಳೇಗಾಲದ ಡಾ.ರಾಜಕುಮಾರ್ ರಸ್ತೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಗಳನ್ನು ವಿಸ್ತರಣೆ ಮಾಡಬೇಕೆಂದು ಆಗ್ರಹಿಸಿ ಸಿದ್ದ ಯ್ಯನಪುರ ಗಾಮದ ನಿವಾಸಿ ರಾಜು ಚಾಮರಾಜನಗರದ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರುತಿ ಅವರಿಗೆ ಮನವಿ ಸಲ್ಲಿಸಿದರು.
Published on

ಕೊಳ್ಳೇಗಾಲ: ಪಟ್ಟಣದ ಡಾ.ರಾಜಕುಮಾರ್ ರಸ್ತೆ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ರಸ್ತೆಗಳನ್ನು ವಿಸ್ತರಣೆ ಮಾಡಿ ಎಂದು ಒತ್ತಾಯಿಸಿ ಸಿದ್ದಯ್ಯನಪುರ ಗಾಮದ ನಿವಾಸಿ ರಾಜು ಕೊಳ್ಳೇಗಾಲದಿಂದ ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಪಾದಯಾತ್ರೆ ಕೈಗೊಂಡು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರುತಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಸೋಮವಾರ ಬೆಳಗ್ಗೆ ರಾಜು ಮಾಲಾರ್ಪಣೆ ಮಾಡಿದ ಬಳಿಕ ಯಳಂದೂರು ಸಂತೆಮರಹಳ್ಳಿ ರಸ್ತೆಯ ಮೂಲಕ ಪಾದಯಾತ್ರೆ ನಡೆಸಿ ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ತಲುಪಿ ಜಿಲ್ಲಾ ಪಂಚಾಯಿತಿ ಉಪಕಾರ್ಯ ದರ್ಶಿಗೆ ರಸ್ತೆ ವಿಸ್ತರಣೆ ಮಾಡುವಂತೆ ಆಗ್ರಹಿಸಿ ಮನವಿ ನೀಡಿದ್ದಾರೆ.

ಈ ಬಗ್ಗೆ ರಾಜು ಮಾತನಾಡಿ, ಕೊಳ್ಳೇಗಾಲದ ಡಾ.ರಾಜಕುಮಾರ್ ರಸ್ತೆ ಡಾ.ಬಿ.ಆರ್ ಅಂಬೇಡ್ಕರ್ ರಸ್ತೆ ಕಿರಿದಾಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಪ್ರತಿನಿತ್ಯ ಕಿರಿಕಿರಿ ಅನುಭವಿಸುತ್ತಿದ್ದಾರೆ. ಹಲವು ವರ್ಷಗಳಿಂದ ಈ ಎರಡೂ ರಸ್ತೆಗಳ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದು ತಣ್ಣಗಾಗುತ್ತಿದೆ. ಹಾಗಾಗಿ ಈ ರಸ್ತೆಗಳನ್ನು ತುರ್ತಾಗಿ ವಿಸ್ತರಣೆ ಮಾಡಬೇಕೆಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net