

ಸೋಮವಾರಪೇಟೆ : ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯಿಂದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಇತ್ತೀಚೆಗೆ ಸಲ್ಲಿಸಲಾಯಿತು.
ಪಟ್ಟಣದಲ್ಲಿರುವ ಶಾಸಕ ಕಚೇರಿಯಲ್ಲಿ ಮನವಿ ಸಲ್ಲಿಸಿದ ಪದಾಧಿಕಾರಿಗಳು, ಹಿಡುವಳಿ ಭೂಮಿಯನ್ನು ವಿಭಜನೆ ಮಾಡಿ ಖಾತೆ ವಿಂಗಡಣೆ, ಫಾರ್ಮ್ ನಂಬರ್ 50 ಮತ್ತು 53ರಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವುದು, ಕೃಷಿ ಭೂಮಿಗೆ ಕಂದಾಯ ನಿಗದಿ, ಹೊಸದಾಗಿ ಕಂದಾಯ ವೃತ್ತಗಳ ನಿರ್ಮಾಣ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು.
ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ, ಉಪಾಧ್ಯಕ್ಷ ಕೆ.ಎನ್. ದೀಪಕ್, ಕಾರ್ಯದರ್ಶಿ ಆದರ್ಶ್ ತಮ್ಮಯ್ಯ, ಖಜಾಂಚಿ ತ್ರಿಶೂಲ್, ಹೂವಯ್ಯ ಮಾಸ್ಟರ್, ಜಯರಾಂ, ಉದಯ, ಅನಂತ್, ಮಂಜುನಾಥ್ ಸೇರಿದಂತೆ ಇತರರು ಇದ್ದರು.