

Film Award: ಹಿರಿಯ ಕಲಾವಿದೆ ದಿವಂಗತ ಬಿ.ಸರೋಜಾದೇವಿ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡುವಂತೆ ಒತ್ತಾಯಿಸಿ ನಟಿ ತಾರಾ ಅನುರಾಧ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬುಧವಾರ ಮನವಿ ಸಲ್ಲಿಸಿದರು.
ಕನ್ನಡದ ನಟಿ ಬಿ.ಸರೋಜಾದೇವಿ ಜುಲೈ14 ರಂದು ನಿಧನರಾಗಿದರು. 6 ದಶಕಗಳ ಕಾಲ ಸಿನಿಮಾಗಳಲ್ಲಿ ಮಿಂಚಿದ್ದ ಸರೋಜಾದೇವಿ ಅವರ ನಿಧನಕ್ಕೆ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಸಿನಿ ಪ್ರೇಕ್ಷಕರು ಕಂಬನಿ ಮಿಡಿದಿದ್ದಾರೆ.
ಇದೀಗ ಸರೋಜಾದೇವಿ ಅವರಿಗೆ ವಿಶೇಷ ಗೌರವ ಸಲ್ಲಿಸಲು ತಯಾರಿ ನಡೆಯುತ್ತಿದೆ. ಈ ಸಂಬಂಧ ಹಿರಿಯ ನಟಿ ತಾರಾ ಅನುರಾಧ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.