ಈದ್ ಮಿಲಾದ್ ಮೆರವಣಿಗೆ ನಿಷೇಧಿಸಲು ಮನವಿ

manavi
ಶಿವಮೊಗ್ಗ ಜಿಲ್ಲೆಯಲ್ಲಿ ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ನೀಡದಂತೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಜಿಲ್ಲಾ ಘಟಕದ ಪ್ರಮುಖರಾದ ಸುರೇಶ್ ಬಾಬು, ಅರ್ಜುನ್, ಅಂಕುಶ್, ರಾಜೇಶ್ ಗೌಡ, ನಾಗೇಶ್ ಮುಂತಾದವರು ಎಸ್‌ಪಿ ಮಿಥುನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
Published on

ಶಿವಮೊಗ್ಗ: ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಈ ಬಾರಿ ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಜಿಲ್ಲಾ ಘಟಕದ ಪ್ರಮುಖರು ಶನಿವಾರ ಎಸ್‌ಪಿ ಜಿ.ಕೆ.ಮಿಥುನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಮಂಡ್ಯ ಜಿಲ್ಲೆ ನಾಗಮಂಗಲದ ದರ್ಗಾ ಬಳಿ ಗಣೇಶ ಮೂರ್ತಿ ಮೆರವಣಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಘಟನೆಯಿಂದ ಹಿಂದು ಸಮಾಜ ಆತಂಕಗೊಂಡಿದೆ. ನಿಷೇಧಿತ ಸಂಘಟನೆಗಳು ಕೋಮು ಸೌಹಾರ್ದ ಕದಡುವ ದೃಷ್ಟಿಯಿಂದ ಕಲ್ಲು ತೂರಾಟ ನಡೆಸಿರುವ ಅನುಮಾನವಿದೆ. ಶಿವಮೊಗ್ಗದಲ್ಲೂ ಈ ರೀತಿ ಘಟನೆಗಳು ನಡೆಯುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ರಕ್ಷಣಾ ಇಲಾಖೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಕಳೆದ ವರ್ಷ ರಾಗಿಗುಡ್ಡದಲ್ಲಿ ಕೋಮು ಸೌಹಾರ್ದ ಕದಡುವ ಹುನ್ನಾರ ನಡೆಸಲಾಗಿತ್ತು. ಆ ಘಟನೆಯಿಂದ ಹಿಂದುಗಳ ಮನದಲ್ಲಿ ಭಯ ಸೃಷ್ಟಿಯಾಗಿತ್ತು. ಈ ವರ್ಷ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದಾದಲ್ಲಿ ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರಮುಖರಾದ ಸುರೇಶ್ ಬಾಬು, ರಾಜೇಶ್ ಗೌಡ, ಅಂಕುಶ್, ನಾಗೇಶ್, ಅರ್ಜುನ್ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net