ಜಾಂಡೀಸ್ ನಿಯಂತ್ರಿಸುವಂತೆ ಮನವಿ

manavi to adc
ಡೆಂೆ ಹಾಗೂ ಜಾಂಡೀಸ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಪ್ರಮುಖರು ಎಡಿಸಿ ಸಿದ್ದಲಿಂಗ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. ರುದ್ರಮುನಿ ಎನ್. ಸಜ್ಜನ್, ಸೋಮನಾಥ್, ಮಲ್ಲಿಕಾರ್ಜುನ ಸ್ವಾಮಿ, ಗೀತಾ ರವೀಂದ್ರ, ಜಗದೀಶ್ ಇತರರಿದ್ದರು.
Published on

ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಯಾಗದ ಕಾರಣ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಡೆಂೆ ಹಾಗೂ ಜಾಂಡೀಸ್ ಹೆಚ್ಚಳವಾಗಿದೆ. ಇವುಗಳನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಪ್ರಮುಖರು ಗುರುವಾರ ಎಡಿಸಿ ಸಿದ್ದಲಿಂಗ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ಕಲುಷಿತ ನೀರು ಪೂರೈಕೆಯಾಗುತ್ತಿರುವ ಬಗ್ಗೆ ನಗರ ನೀರು ಸರಬರಾಜು ಮಂಡಳಿ ಹಾಗೂ ಪಾಲಿಕೆ ಅಧಿಕಾರಿಗಳು ಗಂಭೀರ ಚಿಂತನೆ ಮಾಡಬೇಕು. ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಎಲ್ಲ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಮೆಗ್ಗಾನ್ ಆಸ್ಪತ್ರೆಯಲ್ಲಿ ಜಾಂಡೀಸ್ ಹಾಗೂ ಡೆಂೆ ಸಮಸ್ಯೆಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಸೊಳ್ಳೆ ಕಾಟ ನಿಯಂತ್ರಿಸಲು ನಗರ ಪಾಲಿಕೆಯಿಂದ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಎನ್.ಸಜ್ಜನ್, ಶಿವಮೊಗ್ಗ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಪ್ರಮುಖರಾದ ಸೋಮನಾಥ್, ಜಗದೀಶ್, ಗೀತಾ ರವೀಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net