ಅಕ್ರಮಗಳಿಗೆ ತಡೆಯೊಡ್ಡಲು ಡಿಸಿಗೆ ಮನವಿ

manavi
ಭದ್ರಾವತಿ ತಾಲೂಕಿನಲ್ಲಿ ಹೆಚ್ಚುತ್ತಿರುವ ಅಕ್ರಮ, ಅನೈತಿಕ ಚಟುವಟಿಕೆ ತಡೆಯುವಂತೆ ಒತ್ತಾಯಿಸಿ ಹಿತರಕ್ಷಣಾ ವೇದಿಕೆಯ ಏಸುಕುಮಾರ, ತೀರ್ಥೇಶ್ ಮುಂತಾದವರು ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.
Published on

.

ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿ ನಡೆಯುತ್ತಿರುವ ಕಾನೂನುಬಾಹಿರ ಚಟುವಟಿಕೆಗಳನ್ನು ಸಂಪೂರ್ಣ ಮಟ್ಟ ಹಾಕಬೇಕು ಎಂದು ಆಗರಹಿಸಿ ಭದ್ರಾವತಿ ಹಿತರಕ್ಷಣಾ ವೇದಿಕೆ ಪ್ರಮುಖರು ಸೋಮವಾರ ಜಿಲ್ಲಾಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.

ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿವೆ. ಓಸಿ, ಇಸ್ಪೀಟ್, ಗಾಂಜಾ ಹಾವಳಿ ಮಿತಿಮೀರಿದೆ. ಯುವಕರು ದುಷ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಭದ್ರಾವತಿ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಇಸ್ಪೀಟ್ ದಂಧೆ ಎಗ್ಗಿಲ್ಲದೇ ಸಾಗುತ್ತಿದೆ. ಪೊಲೀಸರು ಕೂಡ ಸುಮ್ಮನಿದ್ದಾರೆ ಎಂದು ಮನವಿಯಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಇಸ್ಪೀಟ್‌ನಿಂದ ಸಾಲ ಮಾಡಿಕೊಂಡವರು ಪ್ರಾಣ ಕಳೆದುಕೊಂಡಿದ್ದಾರೆ. ವಾರದ ಬಡ್ಡಿ ಮಿತಿ ಮೀರಿದೆ. ಜೂಜಾಟಕ್ಕೆ ಬಲಿಯಾದ ಯುವಕರು ದಾರಿ ತಪ್ಪಿದ್ದಾರೆ. ತಾಲೂಕಿನ ಜನರು ಅನೈತಿಕ, ಅಕ್ರಮ ಚಟುವಟಿಕೆಗಳಿಗೆ ಸಾಕ್ಷಿಯಾಗುವಂತಾಗಿದೆ. ಪೊಲೀಸ್ ಇಲಾಖೆ ತಕ್ಷಣ ಈ ಬಗ್ಗೆ ಗಮನಹರಿಸಬೇಕು. ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಪೊಲೀಸರು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಯಿತು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ವೇದಿಕೆಯ ಅಧ್ಯಕ್ಷ ಏಸುಕುಮಾರ್, ಉಪಾಧ್ಯಕ್ಷ ಸಿ.ತೀರ್ಥೇಶ್ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net