ಸುರೇಶ್ ಪತ್ತೆಗೆ ಮನವಿ

15 SARAG 1 ಸುರೇಶ್
ಸುರೇಶ್
Published on

ಸರಗೂರು: ತಾಲೂಕಿನ ಹಾದನೂರು ಗ್ರಾಮದ ಸುರೇಶ್ (30) ನಾಪತ್ತೆಯಾಗಿರುವ ಕುರಿತು ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೂ.12ರಂದು ಎಂದಿನಂತೆ ರಾತ್ರಿ ಮನೆಯಲ್ಲಿ ಮಲಗಿದ್ದು, ಜೂ.13ರಂದು ಬೆಳಗ್ಗೆ ಮನೆಯವರು ಎದ್ದು ನೋಡಿದಾಗ ಆತ ಮನೆಯಲ್ಲಿ ಇರಲಿಲ್ಲ. ಬಳಿಕ ಸಂಬಂಧಿಕರು ಹಾಗೂ ಗೆಳೆಯರನ್ನು ವಿಚಾರಿಸಲಾಯಿತಾದರೂ ಎಲ್ಲೂ ಪತ್ತೆಯಾಗಿಲ್ಲ ಎಂದು ಆತನ ಸಹೋದರ ರವಿಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.

ಸುರೇಶ್ ಮನೆ ಬಿಟ್ಟುವಾಗ ನೀಲಿ ಟಿ- ಶರ್ಟ್, ಕಪ್ಪು ಪ್ಯಾಂಟ್ ಧರಿಸಿದ್ದು, ಈತನ ಗುರುತು ಸಿಕ್ಕರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net