ಚೌಡೇಶ್ವರಿ ಬಡಾವಣೆಗೆ ಸಿಸಿ ಕ್ಯಾಮರಾ ಅಳವಡಿಸಲು ಆಯುಕ್ತರಿಗೆ ಮನವಿ

Chowdeshawari Manavi
ಶ್ರೀ ಚೌಡೇಶ್ವರಿ ಬಡಾವಣೆಯಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿಬೇಕೆಂದು ಆಗ್ರಹಿಸಿ ನಿವಾಸಿಗಳ ಸಂಘದ ಪದಾಧಿಕಾರಿಗಳು ಪಾಲಿಕೆ ಆಯುಕ್ತ ಕೆ.ಮಾಯಣ್ಣ ಗೌಡ ಅವರಿಗೆ ಮನವಿ ಸಲ್ಲಿಸಿದರು. ಸಿ.ಶಿವಶಂಕರ್, ಪ್ರಯಾಗ್ ಪ್ರಸಾದ್ ಸಿಂಗ್, ಜಿ.ಎಂ.ಸಂಗಮೇಶ್, ಎಸ್.ಪ್ರಶಾಂತ್ ಇತರರಿದ್ದರು.
Published on

ಶಿವಮೊಗ್ಗ: ಚೌಡೇಶ್ವರಿ ಬಡಾವಣೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕೆಂದು ಆಗ್ರಹಿಸಿ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಗುರುವಾರ ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣ ಗೌಡ ಅವರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ ವಿದ್ಯಾನಗರದ ಶ್ರೀ ಚೌಡೇಶ್ವರಿ ಬಡಾವಣೆಯ ಬಾನು ಬೀದಿ, ಸುಭಾಷ್‌ನಗರ ಸೇರಿ ಸುತ್ತಮುತ್ತ ಪ್ರದೇಶಗಳಲ್ಲಿ ಅಪರಿಚಿತ ವ್ಯಕ್ತಿಗಳ ಗುಂಪು ತಡರಾತ್ರಿ 1ರಿಂದ 2 ಗಂಟೆ ಸಮಯದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುವ ದೃಶ್ಯಗಳು ಕೆಲವು ಮನೆಗಳ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಬಡಾವಣೆಯ ನಾಗರಿಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ದೂರಿದರು.

ಈಗಾಗಲೇ ಪೊಲೀಸ್ ಠಾಣೆ ಗಮನಕ್ಕೂ ತಂದಿದ್ದೇವೆ. ಸುರಕ್ಷತೆ ದೃಷ್ಟಿಯಿಂದ ಬಡಾವಣೆಯ ಹಲವು ಭಾಗಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು. ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚು ಸಿಸಿ ಕ್ಯಾಮರಾಗಳನ್ನು ಅಳವಡಿಸಿದರೆ ಅಪರಿಚಿತ ವ್ಯಕ್ತಿಗಳ ಚಲನವಲನ ವೀಕ್ಷಿಸಲು ಮತ್ತು ಸೂಕ್ತ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟರು.

ಸಂಘದ ಗೌರವಾಧ್ಯಕ್ಷ ಸಿ.ಶಿವಶಂಕರ್, ಅಧ್ಯಕ್ಷ ಪ್ರಯಾಗ್ ಪ್ರಸಾದ್ ಸಿಂಗ್, ಉಪಾಧ್ಯಕ್ಷ ಜಿ.ಎಂ.ಸಂಗಮೇಶ್, ಪ್ರಧಾನ ಕಾರ್ಯದರ್ಶಿ ಎಸ್.ಪ್ರಶಾಂತ್, ಖಜಾಂಚಿ ಎಚ್.ಪಿ.ನಾಗರಾಜ್, ಸಂಘಟನಾ ಕಾರ್ಯದರ್ಶಿ ಗಂಗಾಧರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net