ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಜಿಪಂ ಸಿಇಒಗೆ ಮನವಿ

Request for increase in honorarium
ರಾಜ್ಯ ಗ್ರಾಪಂ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಹಾಗೂ ಸ್ಥಳೀಯ ಸಂಪನ್ಮೂಲಗಳ ಮಹಾ ಒಕ್ಕೂಟದ ಪದಾಧಿಕಾರಿಗಳು ಜಿಪಂ ಸಿಇಒ ಸ್ನೇಹಲ್ ಲೋಖಂಡೆ ಅವರಿಗೆ ಮನವಿ ಸಲ್ಲಿಸಿದರು.
Published on

ಶಿವಮೊಗ್ಗ: ಗ್ರಾಮ ಪಂಚಾಯಿತಿ ಮುಖ್ಯ ಪುಸ್ತಕ ಬರಹಗಾರರ ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ಗ್ರಾಪಂ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಹಾಗೂ ಸ್ಥಳೀಯ ಸಂಪನ್ಮೂಲಗಳ ಮಹಾ ಒಕ್ಕೂಟದ ಪದಾಧಿಕಾರಿಗಳು ಜಿಪಂ ಸಿಇಒ ಸ್ನೇಹಲ್ ಲೋಖಂಡೆ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಸಂಜೀವಿನಿ ಯೋಜನೆಯಡಿ ಗ್ರಾಪಂ ಮಟ್ಟದಲ್ಲಿ ಸ್ವ-ಸಹಾಯ ಒಕ್ಕೂಟಗಳ ಗುಂಪು ರಚಿಸಿಕೊಂಡು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ನಿರ್ವಹಿಸುತ್ತಾ ಬಂದಿದ್ದೇವೆ. ಆದರೆ ಇನ್ನೂ ಉತ್ತಮ ಮಟ್ಟದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಗೌರವಧನವನ್ನು 20 ಸಾವಿರ ರೂ.ಗೆ ಹೆಚ್ಚಿಸಬೇಕು. ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಗೆ 15 ಸಾವಿರ ರೂ.ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಎಲ್ಲ ಜಿಲ್ಲೆಗಳಲ್ಲಿ ಏಕರೂಪ ವೇತನಶ್ರೇಣಿ ನಿಗದಿಪಡಿಸಬೇಕು. ಸೇವಾ ಹಿರಿತನದ ಮೇಲೆ ವೇತನ ನಿಗದಿಪಡಿಸಬೇಕು. ಎಂಬಿಕೆ ಮತ್ತು ಎಲ್‌ಸಿಆರ್‌ಪಿ ನೌಕರರ ಬೇಡಿಕೆ ಈಡೇರಿಸಲು ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು. ಒಕ್ಕೂಟದ ಅಧ್ಯಕ್ಷೆ ರುದ್ರಮ್ಮ ಸೇರಿ ಹಲವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net