

ಬೆಂಗಳೂರು: ಮೈಸೂರು - ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ, ಈ ಕ್ಷೇತ್ರಕ್ಕೆ ಹೊಸದಾಗಿ ಚುನಾವಣೆ ನಡೆಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.
ತಮ್ಮ ನಾಮಪತ್ರವನ್ನು ಸೂಕ್ತ ಕಾರಣವಿಲ್ಲದೆ ತಿರಸ್ಕರಿಸಿದ್ದ ಚುನಾವಣಾಧಿಕಾರಿಯ ಕ್ರಮವನ್ನು ಪ್ರಶ್ನಿಸಿ ಬಹುಜನ ಸಮಾಜವಾದಿ ಪಕ್ಷದ(ಬಿಎಸ್‌ಪಿ) ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ರೇವತಿ ರಾಜ್ ಅಲಿಯಾಸ್ ಭೀಮಪುತ್ರಿ ರೇವತಿ ರಾಜ್ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯಲ್ಲಿ ಚುನಾವಣಾ ಆಯೋಗ, ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಇತರೆ ಪರಾಜಿತ ಅಭ್ಯರ್ಥಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಾಗಿದೆ.