

ಮೈಸೂರು: ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ ಡೆಹರಾಡೂನ್‌ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರ ಪ್ರವೇಶಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 01 ರಂದು ನಡೆಸಲಾಗುವುದು. ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಬಾಲಕ ಮತ್ತು ಬಾಲಕಿಯರು ಸೆಪ್ಟ್ಂಬರ್ 30 ರೊಳಗೆ ಅರ್ಜಿಯನ್ನು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಭವನದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ದೂ.ಸಂ:080-25589459 ಅಥವಾ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.