ಕೇಂದ್ರ ಸರ್ಕಾರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Scholarship
Published on

ಬೆಂಗಳೂರು ದ್ವಿತೀಯ ಪಿಯುಸಿಯಲ್ಲಿ ಶೇ.80ಕ್ಕಿಂತ ಹೆಚ್ಚಿನ ಅಂಕವನ್ನು ಪಡೆದಿರುವ ಮತ್ತು 3 ವರ್ಷಗಳ ಪದವಿ ವ್ಯಾಸಂಗ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಂದ ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯು ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ಪಿಎಂ ಉಷಾ ಹೆಸರಿನಲ್ಲಿ 2024-25ನೇ ಸಾಲಿನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಜಾಲತಾಣ http://www.scholarship.gov.in ಮೂಲಕ ನ್ಯಾಷನಲ್ ಇ ಸ್ಕಾಲರ್‌ಶಿಪ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡು ್ರೆಶ್ ಬ್ಯಾಚ್ ಮತ್ತು ನವೀಕೃತ ಬ್ಯಾಚ್‌ನ ಅರ್ಜಿಗಳನ್ನು ಅಕ್ಟೋಬರ್ 31ರ ವರೆಗೆ ಸಲ್ಲಿಸಬಹುದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮೊದಲ 3 ವರ್ಷ ತಲಾ 12 ಸಾವಿರ ರೂ. ಮತ್ತು ಕೊನೆಯ 2ವರ್ಷ ತಲಾ 20 ಸಾವಿರ ರೂ.ಗಳನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ 080- 23311330 ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net