

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಹಾಗೂ ಕೆನರಾ ಬ್ಯಾಂಕ್ ಸಹಯೋಗದಲ್ಲಿ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಕೋಳಿ ಸಾಕಾಣಿಕೆ ಕುರಿತು 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತರು 18-45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಹೊಂದಿರಬೇಕು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ಈ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ಕೂಡ ವಿತರಿಸಲಾಗುವುದು. ಆಸಕ್ತರು ಅರ್ಜಿಯನ್ನು ಸೆ.5ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 8884554510 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ತಿಳಿಸಿದ್ದಾರೆ.