ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Published on

ನಂಜನಗೂಡು: ನಗರದ ಶ್ರೀ ಕನಕದಾಸ ಸಾರ್ವಜನಿಕ ವಿದ್ಯಾರ್ಥಿನಿಲಯದಲ್ಲಿರುವ ಶ್ರೀಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2022-23ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಪಡೆದಿರುವ ಕುರುಬ ಸಮುದಾಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರಗಳ ನಕಲು ಪ್ರತಿಗಳನ್ನು ಸಂಘದ ಕಚೇರಿಗೆ ಡಿ. 15ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 9739258545 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net