ಒಕ್ಕಲಿಗ ಸಮುದಾಯಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

application
Published on

ಮೈಸೂರು: ಹಿಂದುಳಿದ ವರ್ಗಗಳ ಪ್ರವರ್ಗ-3ಎ ನಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಕ್ರಮ ಸಂಖ್ಯೆ 1 ರ(ಎ)ಯಿಂದ(ಟಿ)ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ (Gowda)/ ಗೌಡ (Gouda), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ/ ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2023-24 ನೇ ಸಾಲಿನಲ್ಲಿ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯಡಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ್ಯ  ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾಸಿಂಧು https://www.kaushalkar.com ಪೋರ್ಟಲ್, ಗ್ರಾಮಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಗಸ್ಟ್ 30 ರೊಳಗೆ ಸಲ್ಲಿಸಬಹುದಾಗಿದೆ.

 ಯೋಜನೆಯ ಅರ್ಹತೆ, ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ https://kvcdc.karnataka.gov.in  ವೆಬ್‌ಸೈಟ್ ಅಥವಾ ನಿಗಮದ ದೂ.ಸಂ: 080-29904350, 29904268 ಹಾಗೂ ಮೈಸೂರು ಜಿಲ್ಲಾ ಕಛೇರಿಯ ದೂ.ಸಂ: 0821-2341194 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಎಚ್.ಎ ಶೋಭಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net