

ಮೈಸೂರು: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿನ ಧನಶ್ರೀ (ಹೆಚ್.ಐ.ವಿ ಸೋಂಕಿತ ಮಹಿಳೆಯರಿಗೆ) ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ ಜೆಂರ‍್ಸ್ ಗಳಿಗೆ) ಪುನರ್ವಸತಿ ಯೋಜನೆ, ಚೇತನ (ದಮನಿತ ಮಹಿಳೆಯರಿಗೆ) ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 21 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರನ್ನು ಕಚೇರಿ ವೇಳೆಯಲ್ಲಿ ಹಾಗೂ ದೂ.ಸಂ: 0821-2495432 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.