ಬಿ.ಇಡಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ: ಡಿ.11ರ ವರೆಗೆ ಅವಧಿ ವಿಸ್ತರಣೆ

B.Ed Students Logo
Published on

ಬೆಂಗಳೂರು: 2023-24ನೇ ಸಾಲಿನ ಬಿ.ಇಡಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.11ರ ವರೆಗೆ ವಿಸ್ತರಿಸಲಾಗಿದೆ.

ಬಿ.ಇಡಿ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳ ದಾಖಲಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಅವಧಿ ಮುಗಿದಿದ್ದು, ಅಭ್ಯರ್ಥಿಗಳ ಮನವಿ ಮೇರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net