ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಮಾಸಿಕ ಗೌರವ ಧನ ಎಷ್ಟಿರುತ್ತದೆ?

Anganawadi
Published on

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್​​ಲೈನ್ ಅರ್ಜಿ ಆಹ್ವಾನಿಸಲಾಗಿದೆ.

10 ಕಾರ್ಯಕರ್ತೆ ಹಾಗೂ 66 ಸಹಾಯಕಿ ಹುದ್ದೆಗಳಿವೆ. ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು.  ಮಾಸಿಕ ಗೌರವ ಧನ 10,000 ರೂ. ಇರುತ್ತದೆ. ಸಹಾಯಕಿ ಹುದ್ದೆಗೆ ಕನಿಷ್ಠ 4 ನೇ ತರಗತಿ ಪಾಸಾಗಿರಬೇಕು ಹಾಗೂ 9 ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ. ಮಾಸಿಕ ಗೌರವ ಧನ 5 ಸಾವಿರ ರೂ. ಇರುತ್ತದೆ.

ವಯೋಮಿತಿ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ಪೂರೈಸಿರಬೇಕು. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 30ರೊಳಗೆ ಅರ್ಜಿ ಸಲ್ಲಿಸಬಹುದು. ಆನ್​ಲೈನ್ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ https://anganwadirecruit.kar.nic.in ವೆಬ್​ಸೈಟ್ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net