ಕೇಂದ್ರೀಯ ವಿವಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Published on

ಹುಬ್ಬಳ್ಳಿ: ಗುಲ್ಬರ್ಗಾ ಕೇಂದ್ರೀಯ ವಿಶ್ವದ್ಯಾಲಯದ ಸ್ನಾತಕೋತ್ತರ ಕೋರ್ಸ್‌ಗಳಿಗೆ (ಬಿಎಡ್ ಒಳಗೊಂಡಂತೆ) ಸಿಯುಇಟಿ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿವಿ ಕುಲಸಚಿವ ಆರ್.ಆರ್. ಬಿರಾದಾರ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎ ಇಂಗ್ಲಿಷ್, ಹಿಂದಿ, ಕನ್ನಡ, ಭಾಷಾಶಾಸ್ತ್ರ, ಜಾನಪದ ಮತ್ತು ಬುಡಕಟ್ಟು ಅಧ್ಯಯನ, ಅರ್ಥಶಾಸ್ತ್ರ, ಇತಿಹಾಸ, ಸಾರ್ವಜನಿಕ ಆಡಳಿತ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸೇರಿ ಒಟ್ಟು 19 ಕೋರ್ಸ್‌ಗಳಿಗೆ ಸಿಯುಇಟಿ ಪರೀಕ್ಷೆ ಮೂಲಕ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಎಂದರು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜ. 2ರಿಂದ ಪ್ರಾರಂಭವಾಗಿದ್ದು, ಸ್ನಾತಕ 5ನೇ ಸೆಮಿಸ್ಟರ್ ಪರೀಕ್ಷೆ ಬರೆದಿರುವ, ಅಂತಿಮ ಸೆಮಿಸ್ಟರ್‌ನಲ್ಲಿ ಓದುತ್ತಿರುವ ಮತ್ತು ಈಗಾಗಲೇ ಉತ್ತೀರ್ಣರಾಗಿರುವ ಆಸಕ್ತ ವಿದ್ಯಾರ್ಥಿಗಳು (((ಠಿಠಿ:ಛ್ಡಿಞ.್ಞಠಿ.ಚ್ಚ.ಜ್ಞಿ/ಇಖಿಉಎ/))))) ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಫೆ. 1 ಕೊನೆಯ ದಿನವಾಗಿದೆ. ಪರೀಕ್ಷೆಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ) ಮೋಡ್‌ನಲ್ಲಿ ನಡೆಸಲಾಗುತ್ತದೆ ಎಂದು ವಿವರಿಸಿದರು.

ಇಸಿ ಸದಸ್ಯ ಡಾ. ರಘು ಅಕಮಂಚಿ ಮಾತನಾಡಿ, ದೇಶದ ಬೇರೆ ಬೇರೆ ಭಾಗಗಳಿಂದ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಿದ್ದಾರೆ. ಕರ್ನಾಟಕದಿಂದ ಅದರಲ್ಲೂ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳು ಬಹಳಷ್ಟು ಜನರು ಬರುತ್ತಿಲ್ಲ. ಈ ವಿಶ್ವವಿದ್ಯಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net