

ಬೆಂಗಳೂರು: ನ್ಯಾಷನಲ್ ಮೀನ್ಸ್ ಕಂ-ಮೆರಿಟ್ ಸ್ಕಾಲರ್‌ಶಿಪ್ (ಎನ್‌ಎಂಎಂಎಸ್) ಸ್ಕಾಲರ್‌ಶಿಪ್ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಲು ಅ.15 ಕೊನೆಯ ದಿನವಾಗಿದೆ. ಪರೀಕ್ಷೆಯು ಡಿ.7ರಂದು ನಡೆಯಲಿದೆ.
ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ಎಂಟನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ.
ಅರ್ಹತೆಗಳೇನು?
ಪಾಲಕರ ಆದಾಯ ವಾರ್ಷಿಕ 3.50 ಲಕ್ಷ ರೂ. ಮೀರಿರಬಾರದು. ಏಳನೇ ತರಗತಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಗಳಿಸಿರಬೇಕು. ಪ್ರತಿ ಜಿಲ್ಲೆಯಲ್ಲಿ ಪರೀಕ್ಷೆ ಬರೆದ ಒಟ್ಟು ವಿದ್ಯಾರ್ಥಿಗಳಲ್ಲಿ ಮೀಸಲಾತಿ ಹಾಗೂ ಅರ್ಹತಾ ನಿಯಮ ಅನುಸಾರ ರ‌್ಯಾಂಕ್ ಆಧರಿಸಿ ಡಿಎಸ್‌ಇಆರ್‌ಟಿ ವತಿಯಿಂದ ಅರ್ಹರನ್ನು ಸ್ಕಾಲರ್‌ಶಿಪ್‌ಗೆ ಆಯ್ಕೆ ಮಾಡಲಾಗುತ್ತದೆ.
ಮಾಸಿಕ ಒಂದು ಸಾವಿರ ರೂ. ನಂತೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿವರ್ಷ 12 ಸಾವಿರ ರೂ.ಗಳನ್ನು ಶಿಷ್ಯವೇತನವಾಗಿ ನೀಡಲಾಗುತ್ತದೆ. 9ನೇ ತರಗತಿಯಿಂದ 12ನೇ ತರಗತಿಯವರೆಗೂ ನಾಲ್ಕು ವರ್ಷಗಳ ತನಕ ನೀಡಲಾಗುತ್ತದೆ. ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಧಿಸೂಚನೆ ಲಿಂಕ್: ಠಿಠಿ://ಚಿಜಿಠಿ.್ಝ/4ಞಘ5ಟಿಓ5 ಸಂಪರ್ಕಿಸಬಹುದು.