ಪರಿಷತ್ ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಆಹ್ವಾನ!

dkshivakumar
Published on

ಬೆಂಗಳೂರು: ವಿಧಾನ ಪರಿಷತ್ತಿಗೆ 2026ರ ನವೆಂಬರ್‌ನಲ್ಲಿ ನಡೆಯಲಿರುವ 2 ಪದವೀಧರರ ಮತ್ತು 2 ಶಿಕ್ಷಕರ ಕ್ಷೇತ್ರಗಳ ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜುಗೊಳ್ಳುತ್ತಿದ್ದು, ಸ್ಪರ್ಧಿಸಲು ಇಚ್ಛಿಸುವ ಆಕಾಂಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಎರಡು ಪದವಿಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಂದ ಚುನಾಯಿತ ಸದಸ್ಯರು 2026ರ ನವೆಂಬರ್ 11ರಂದು ನಿವೃತ್ತರಾಗಲಿದ್ದು, ಆ ಸ್ಥಾನಗಳಿಗೆ ಚುನಾವಣೆ ನಡೆಯಲಿವೆ. ಪಶ್ಚಿಮ ಪದವೀಧರರ ಕ್ಷೇತ್ರದ ವ್ಯಾಪ್ತಿಗೆ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಬರಲಿವೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿತ್ರದುರ್ಗ, ದಾವಣಗೆರೆ (ಚನ್ನಗಿರಿ, ಹೊನ್ನಾಳಿ ಮತ್ತು ಹರಪನಹಳ್ಳಿ ಹೊರತುಪಡಿಸಿ) ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳು ಬರಲಿವೆ. ಅದೇ ರೀತಿಯಾಗಿ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ. (ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ಸೇರಿದಂತೆ) ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳು ಸೇರಲಿವೆ. ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ವತಿಯಿಂದ ಸ್ಪರ್ಧಿಸಲು ಬಯಸುವವರು ನವೆಂಬರ್ 1ರ ಒಳಗಾಗಿ 1 ಲಕ್ಷ ರೂ. ಡಿಡಿಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

ಚುನಾವಣಾ ಆಯೋಗ, ಪೂರ್ವಭಾವಿಯಾಗಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಸಲಿದೆ. ನವೆಂಬರ್ 1 ರಿಂದ ಮತದಾರರ ಪಟ್ಟಿಗೆ ನೋಂದಾಯಿತರಾಗುವವರಿಗೆ ಅವಕಾಶ ಕಲ್ಪಿಸುತ್ತದೆ. ಆದರಿಂದ ಕಾಂಗ್ರೆಸ್ ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ. ಈ ಮೂಲಕ ಪ್ರತಿಪಕ್ಷದವರ ಪಾಲು ಆಗುತ್ತಿರುವ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸಕ್ರಿಯವಾಗಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net