ಕೆಎಸ್‌ಆರ್‌ಟಿಸಿ ಬಸ್ ಪಾಸ್‌ಗಾಗಿ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ

mysore
Published on

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.
೨೦೨೪-೨೫ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಲ್ಲಿ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೆಲವೊಂದು ಕ್ರಮಗಳನ್ನು ಅನುಸರಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಸೇವಾಸಿಂಧು ಪೋರ್ಟಲ್ ಐಡಿ ಖ್ಕಿಔಠಿಠಿ://ಛಿಜ್ಞಿಜ್ಠಛ್ಟಿಜ್ಚಿಛಿ.ಚ್ಟ್ಞಠಿ.ಜಟ.ಜ್ಞಿ/ಚ್ಠಿಛ್ಟಿಜ್ಚಿಛಿ/
  • ವಿದ್ಯಾರ್ಥಿಗಳು ಮೇ ೩೧ ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
  • ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ೩೦ ರೂ. ಸೇವಾ ಶುಲ್ಕವನ್ನು ಆಯಾ ಕೇಂದ್ರಗಳ ಸಿಬ್ಬಂದಿಗೆ ಪಡೆಯಲು ಅವಕಾಶವಿರುತ್ತದೆ.
  • ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು ಡಿಕ್ಲೇರಷನ್ ಾರಂ ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ನಿಗಮದ ವೆಬ್‌ಸೈಟ್‌ನಲ್ಲಿ (ಠಿಠಿ://ಠ್ಟಠ್ಚಿ.ಚ್ಟ್ಞಠಿ.ಜಟ.ಜ್ಞಿ/ಠ್ಠಿಛ್ಞಿಠಿ) ಡೌನ್‌ಲೋಡ್ ಮಾಡಿಕೊಳ್ಳುವುದು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ ಸಬ್ಮಿಟ್ ಮಾಡುವುದು.
  • ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿ ಪಾಸುಗಳನ್ನು ಜೂನ್ ೧ ರಿಂದ ನಿಗದಿತ ಪಾಸ್ ಕೌಂಟರ್‌ಗಳಲ್ಲಿ ವಿತರಿಸಲಾಗುವುದು.
  • ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / ಯುಪಿಐ ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.
  • ಸರ್ಕಾರವು ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯುವ ಅಗತ್ಯವಿದೆ. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹುದಾಗಿರುತ್ತದೆ. ಸೇವಾಸಿಂಧು ಪೋರ್ಟಲ್ ಮುಖೇನ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಸಂಬಂಧಿಸಿದ ವಿಷಯಗಳಿಗೆ
    ೮೭೯೨೬೬೨೮೧೪ / ೮೭೯೨೬೬೨೮೧೬ ಸಂಪರ್ಕಿಸಿ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net