ಎಐಸಿಸಿ ವೀಕ್ಷಕರಾಗಿ ಸಲೀಂ ಅಹ್ಮದ್ ನೇಮಕ

saleem ahmad latest
Published on

ಬೆಂಗಳೂರು: ಮಹಾರಾಷ್ಟ್ರದ ರಾಯಘಡ ಲೋಕಸಭಾ ಕ್ಷೇತ್ರದ ಎಐಸಿಸಿ ವೀಕ್ಷಕರಾಗಿ ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹ್ಮದ್ ನೇಮಕಗೊಂಡಿದ್ದಾರೆ.
ಮಹಾರಾಷ್ಟ್ರ ರಾಜ್ಯದ ಮುಂಬರುವ ವಿಧಾನ ಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ವೀಕ್ಷಕರ ನೇಮಕವಾಗಿದೆ. ರಾಯಘಢ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಪಕ್ಷದ ಸಂಘಟನೆ, ಅಭ್ಯರ್ಥಿ ಆಯ್ಕೆ, ಚುನಾವಣೆ ತಂತ್ರಗಾರಿಕೆಗಾಗಿ ಎಐಸಿಸಿಯು ಸಲೀಂ ಅಹ್ಮದ್ ಅವರಿಗೆ ಜವಾಬ್ದಾರಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net