ರಾಜ್ಯ ಸರ್ಕಾರದಿಂದ ಮಾಧ್ಯಮ ಅಕಾಡೆಮಿ ಅಧ್ಯಕ್ಷರು, ಸದಸ್ಯರ ನೇಮಕ

ayusha
Published on

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯೇಷಾ ಖಾನಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಕಲಬುರಗಿ ಜಿಲ್ಲೆಯವ ಆಯೇಷಾ ಖಾನಂ ಅವರನ್ನು ಅಕಾಡೆಮಿಯ ನೂತನ ಅಧ್ಯಕ್ಷರಾಗಿದ್ದು, ಚಿತ್ರದುರ್ಗದ ಎಂ.ಎನ್​ ಅಹೋಬಳಪತಿ, ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕರಾದ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತರಾದ ಕೆ.ನಿಂಗಜ್ಜ ಅವರನ್ನು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net