ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ

Siddaramaiah
Published on

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತ ಕಾರ್ಯದರ್ಶಿ,  ಮಾಧ್ಯಮ ಸಲಹೆಗಾರರ ನೇಮಕ ಮಾಡಲಾಗಿದೆ. ಯಾರ್‍ಯಾರು ಯಾವ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆನ್ನುವ ಮಾಹಿತಿ ಇಲ್ಲಿದೆ..

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ನೇಮಕ ಮಾಡಲಾಗಿದೆ. ಮಾಧ್ಯಮ ಸಲಹೆಗಾರರಾಗಿ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ, ಸಿಎಂ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ ಮಾಡಿ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆ.ವಿ ಪ್ರಭಾಕರ್, ಕಳೆದ ಹತ್ತು ವರ್ಷಗಳಿಂದಲೂ ಸಿದ್ದರಾಮಯ್ಯ ಬಳಿ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದಾರೆ.

ಯಾವುದೇ ಹೊಸ ಸರ್ಕಾರ ಆಡಳಿತಕ್ಕೆ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುತ್ತಾರೆ. ಮೊನ್ನೇ ಅಷ್ಟೇ ಅಲೋಕ್ ಮೋಹನ್ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನಾಗಿ ಸರ್ಕಾರ ನೇಮಕಗೊಳಿಸಿತ್ತು. ಇದೀಗ ಸಿಎಂ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net