

ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಆಯೋಜಿಸಿದ್ದ ಎಲ್ಲ ಕಾರ್ಯಕ್ರಮಗಳು ಈ ಬಾರಿ ಜನರ ದಸರವಾಗಿ ಅದ್ದೂರಿಯಾಗಿ ಹಾಗೂ ವಿಜೃಂಭಣೆಯಿಂದ ನಡೆಯಿತು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.
ಆಹಾರಮೇಳ, ಫಲಪುಷ್ಪ ಪ್ರದರ್ಶನ, ಯುವ ಸಂಭ್ರಮ, ಯುವ ದಸರಾ, ಚಲನಚಿತ್ರೋತ್ಸವ, ಕುಸ್ತಿ, ಯೋಗ, ಕವಿಗೋಷ್ಠಿ, ಅರಮನೆಯಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹೆಚ್ಚು ಜನ ವೀಕ್ಷಿಸಿದರು. ಮೊದಲ ಬಾರಿಗೆ ನಡೆದ ಡ್ರೋನ್ ಪ್ರದರ್ಶನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.