ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ವರದಿ ಬಹಿರಂಗಕ್ಕೆ ಸಿ.ಟಿ.ರವಿ ಒತ್ತಾಯ

C T Ravi
Published on

ಬೆಂಗಳೂರು: ಅರ್ಕಾವತಿ ಬಡಾವಣೆಯ ವಿವಾದದ ತನಿಖೆ ನಡೆಸಿದ ನ್ಯಾ.ಕೆಂಪಣ್ಣ ಆಯೋಗದ ವರದಿಯನ್ನು ಬಹಿರಂಗಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಅರ್ಕಾವತಿ ಬಡಾವಣೆಯ 852 ಎಕರೆ ‘ರೀ ಡು’ ಅಥವಾ ಡಿನೋಟಿಫಿಕೇಷನ್ ಪ್ರಕರಣವು ಎಂಟು ಸಾವಿರ ಕೋಟಿ ರೂ. ಮೌಲ್ಯದ್ದು ಎಂದು ಅಂದಾಜಿಸಲಾಗಿದೆ. 2014ರಲ್ಲಿ ಸಿಎಂ ಆಗಿದ್ದ ಈಗಲೂ ಸಿಎಂ ಆಗಿರುವ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಭುಗಿಲೆದ್ದ ವಿವಾದವಿದು.

ರೀ ಡು ಹಗರಣದ ನೈಜತೆ ತಿಳಿದು ವರದಿ ಸಲ್ಲಿಸಲು ಎಂದು ಸ್ವತಃ ಸಿದ್ದರಾಮಯ್ಯ ಅವರೇ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚಿಸಿ, ವಿಚಾರಣೆಗೆ ಆದೇಶಿಸಿದ್ದರು.

ಈ ಆಯೋಗ ವಿಚಾರಣೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿಯಾಗಿದೆ. ಭ್ರಷ್ಟಾಚಾರದ ವಿರೋಧಿಯಾಗಿರುವ ಸಿಎಂ ಸಿದ್ದರಾಮಯ್ಯ, ನ್ಯಾ.ಕೆಂಪಣ್ಣ ವರದಿಯನ್ನು ಜನರ ಮುಂದಿಟ್ಟು ತಾವೇ ಹೇಳಿಕೊಳ್ಳುವಂತೆ ನಿಷ್ಕಳಂಕರು ಎಂಬುದನ್ನು ಸಾಬೀತುಪಡಿಸಬೇಕು ಎಂದು ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net