ಅಸ್ಸಾಂ ಜನರಿಗೆ ಶಸ್ತ್ರಾಸ್ತ್ರ ಪರವಾನಗಿ

2-68374976159f4
Published on

ಗುವಾಹಟಿ: ಅಲ್ಪಸಂಖ್ಯಾತರ ಪ್ರಾಬಲ್ಯದ ಪ್ರದೇಶಗಳಲ್ಲಿ ವಾಸಿಸುವ ಭಾರತದ ನಾಗರಿಕರಿಗೆ ಶಸ್ತ್ರಾಸ್ತ್ರ ಪರವಾನಗಿ ನೀಡುವ ಯೋಜನೆಯನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೊಷಿಸಿದ್ದಾರೆ.

ಈ ನಿರ್ಧಾರವು ರಾಜ್ಯದ ಕೆಲವು ಭಾಗಗಳಲ್ಲಿ ಸ್ಥಳೀಯ ಜನರ ಸುರಕ್ಷತೆಯನ್ನು ಖಾತ್ರಿಪಡಿಸುತ್ತದೆ. ರಾಜ್ಯದ ಶಾಂತಿ ಕಾಪಾಡಲು ಸಹಾಯ ಮಾಡುತ್ತದೆ. ಶಸ್ತ್ರಾಸ್ತ್ರ ಪರವಾನಗಿಗಳನ್ನು ಕಟ್ಟುನಿಟ್ಟಾದ ತಪಾಸಣೆ ಮತ್ತು ಮಾನದಂಡಗಳ ಆಧಾರದ ಮೇಲೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಘೊಷಣೆಯು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕೆಲವರು ಇದನ್ನು ಸ್ವಾಗತಿಸಿದರೆ, ಮತ್ತೆ ಹಲವರು ಸಾಮಾಜಿಕ ಸಾಮರಸ್ಯದ ಮೇಲೆ ಉಂಟಾಗುವ ಪರಿಣಾಮದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net