

ಶ್ರೀನಗರ: ಪಾಕಿಸ್ತಾನಿ ಸೈನಿಕರು ಕದನ ವಿರಾಮ ಉಲ್ಲಂಘಿಸಿ, ನಡೆಸಿದ ಗುಂಡಿನ ದಾಳಿಗೆ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮನಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಮ್ಮುಕಾಶ್ಮೀರದ ಕುಪ್ವಾರಾದಲ್ಲಿರುವ ನೌಗಾಮ್ ಸೆಕ್ಟರ್ನಲ್ಲಿ ಇಂದು ಪಾಕ್ ಕದನ ವಿರಾಮ ಉಲ್ಲಂಘನೆ ಮಾಡಿದೆ. ಆರ್ಮಿ ಗನ್ನರ್ ಆಗಿದ್ದ ಭೂಪಿಂದರ್ ಸಿಂಗ್ ಹುತಾತ್ಮರಾಗಿದ್ದು, ಗಾಯಗೊಂಡ ಇನ್ನಿಬ್ಬರು ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ. ಇದನ್ನೂ ಓದಿ: ‘ಒಮ್ಮೆ ಯುದ್ಧ ಶುರುವಾದರೆ ಭಾರತಕ್ಕೆ ಸೋಲು ನಿಶ್ಚಿತ’- ಮತ್ತೆ ಬೆಂಕಿಗೆ ತುಪ್ಪ ಸುರಿದ ಚೀನಾ
ಗಡಿ ನಿಯಂತ್ರಣಾ ರೇಖೆ ಬಳಿ ಪಾಕ್ ಸೈನಿಕರು ಭಾರತೀಯ ಯೋಧರನ್ನು ಗುರಿಯಾಗಿಸಿ ಅಪ್ರಚೋದಿತ ದಾಳಿ ನಡೆಸಿದ್ದಾರೆ. ಅದಕ್ಕೆ ತಕ್ಕ ಶಾಸ್ತಿ ಮಾಡದೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನ ಕುತಂತ್ರಿ. ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದು ಇದೇ ಮೊದಲಲ್ಲ. ಅದರಲ್ಲೂ ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿದ ಮೇಲಂತೂ ಪದೇಪದೆ ಅಪ್ರಚೋದಿತ ದಾಳಿ ನಡೆಸುತ್ತಲೇ ಬಂದಿದೆ.(ಏಜೆನ್ಸೀಸ್)