ಭಾರತೀಯ ಯೋಧರ ಪರಾಕ್ರಮ... ಕಳೆದ ಮೂರು ವರ್ಷದಲ್ಲಿ ಹತ್ಯೆಯಾದ ಉಗ್ರರೆಷ್ಟು..?

army pic
Published on

ನವದೆಹಲಿ: ಕಳೆದ ಮೂರು ವರ್ಷದಲ್ಲಿ ಭಾರತೀಯ ಯೋಧರು ಹತ್ಯೆ ಮಾಡಿದ ಉಗ್ರರ ಸಂಖ್ಯೆ ಮತ್ತು ಇತರೆ ಮಾಹಿತಿ ಬಗ್ಗೆ ಕೇಂದ್ರ ಸಚಿವ ನಿತ್ಯಾನಂದ ರಾಯ್​ ರಾಜ್ಯಸಭೆಯಲ್ಲಿ ಚರ್ಚೆ ಮಾಡುವ ಸಂದರ್ಭ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಬುಧವಾರ ಮೇಲ್ಮನೆಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಉಗ್ರರಿಂದ ಸತತವಾಗಿ ಅಶಾಂತಿ ಮತ್ತು ಭಯದ ವಾತಾವರಣ ಎದುರಿಸುತ್ತಿದೆ. ಇದಕ್ಕೆ ನಮ್ಮ ಯೋಧರು ತಕ್ಕ ಪ್ರತ್ಯುತ್ತರ ನೀಡುತ್ತಿದ್ದು, ಮೇ 2018 ರಿಂದ ಜೂನ್ 2021 ರವರೆಗೆ 630 ಉಗ್ರರನ್ನು ಸದೆಬಡಿದಿದ್ದಾರೆ. ಅಲ್ಲದೇ 400 ಉಗ್ರರನ್ನು ಎನ್​​ಕೌಂಟರ್ ಮೂಲಕ ಹತ್ಯೆಗೈದಿದ್ದು, ಇದೇ ವೇಳೆ ನಮ್ಮ 85 ಯೋಧರು ಹುತಾತ್ಮರಾಗಿದ್ದಾರೆ ಎಂದರು.

ಸದಾ ಕಾಲು ಕೆರೆದು ಜಗಳಕ್ಕೆ ಬರುವ ಪಾಕಿಸ್ತಾನ ಗಡಿ ನಿಯಂತ್ರಣ ಒಪ್ಪಂದಗಳನ್ನು ಉಲ್ಲಂಘಿಸುತ್ತಲೇ ಬರುತ್ತಿದೆ. ಇದಕ್ಕೆ ನಮ್ಮ ಸೈನಿಕರು ಕೂಡ ತಕ್ಕ ಪ್ರತ್ಯುತ್ತರ ನೀಡುತ್ತಿದ್ದಾರೆ. 2019ರ ಯುಎಪಿಎ ಕಾಯಿದೆ ಪ್ರಕಾರ 1,948 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net