ಶಿವಮೊಗ್ಗದಲ್ಲಿ ಆ.20ರಿಂದ ಸೇನಾ ನೇಮಕಾತಿ

dc
ಅಗ್ನಿವೀರ್ ಸೇನಾ ನೇಮಕಾತಿ ರ‌್ಯಾಲಿಯ ಪೂರ್ವಸಿದ್ಧತೆ ಕುರಿತು ಬುಧವಾರ ಗುರುದತ್ತ ಹೆಗಡೆ ಅಧಿಕಾರಿಗಳ ಸಭೆ ನಡೆಸಿದರು. ಜಿ.ಕೆ.ಮಿಥುನ್‌ಕುಮಾರ್, ಸಿದ್ದಲಿಂಗ ರೆಡ್ಡಿ, ಸತ್ಯನಾರಾಯಣ್, ಕವಿತಾ ಯೋಗಪ್ಪನವರ್, ಸುರೇಶ್ ಮುಂತಾದವರಿದ್ದರು.
Published on

ಶಿವಮೊಗ್ಗ: ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ದೈಹಿಕ ಕ್ಷಮತೆ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ಆ.20ರಿಂದ 31ರವರೆಗೆ ನಗರದ ನೆಹರೂ ಸ್ಟೇಡಿಯಂನಲ್ಲಿ ಆಯೋಜಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು

.
ಅಗ್ನಿವೀರ್ ಸೇನಾ ನೇಮಕಾತಿ ಪೂರ್ವಸಿದ್ಧತೆ ಕುರಿತು ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.
ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ರವಾನಿಸಲಾಗಿದ್ದು, ಪ್ರತಿ ಜಿಲ್ಲೆಗಳ ಅಭ್ಯರ್ಥಿಗಳಿಗೆ ದಿನಾಂಕ ನಿಗಧಿಗೊಳಿಸಲಾಗಿದೆ. ಪ್ರತಿದಿನ ಸುಮಾರು 900ಅಭ್ಯರ್ಥಿಗಳು ಭಾಗವಹಿಸಲಿದ್ದು, ಶುದ್ಧ ಕುಡಿಯುವ ನೀರು, ಉಟೋಪಹಾರ, ಸ್ನಾನ, ಶೌಚಗೃಹಕ್ಕೆ ವ್ಯವಸ್ಥೆ ಕಲ್ಪಿಸಬೇಕೆಂದರು.
ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳು ನಡೆಯಲಿರುವ ನೆಹರೂ ಕ್ರೀಡಾಂಗಣದಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಸಿಸಿ ಕ್ಯಾಮರ ಅಳವಡಿಸಬೇಕು. ನಿರಂತರ ವಿದ್ಯುತ್ ಒದಗಿಸಬೇಕು ಎಂದರು.
ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ನಗರಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್, ಡಿವೈಎಸ್ಪಿ ಸುರೇಶ್, ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ್ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net