ಮಣಿಪುರ; ಸೇನಾ ಯೋಧನನ್ನು ಅಪಹರಿಸಿ ಹತ್ಯೆ

Soldier
Published on

ಇಂಫಾಲ್: ಗಲಭೆ ಪೀಡಿತ ಮಣಿಪುರದಲ್ಲಿ ಭಾರತೀಯ ಸೇನೆಯ ಯೋಧನನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯೂ ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ಖುನಿಂಗ್‌ಥೆಕ್ ಗ್ರಾಮದಲ್ಲಿ ನಡೆದಿದೆ.

ಹುತಾತ್ಮ ಯೋಧನನ್ನು ಕಾಂಗ್‌ಪೊಕ್ಪಿ ಜಿಲ್ಲೆಯ ಲೀಮಾಖೋಂಗ್‌ನಲ್ಲಿ ಸೇನೆಯ ಡಿಫೆನ್ಸ್ ಸೆಕ್ಯುರಿಟಿ ಕಾರ್ಪ್ಸ್(ಡಿಎಸ್‌ಸಿ) ಯೋಧ ಸೆರ್ಟೊ ತಂಗ್‌ಥಾಂಗ್ ಕೋಮ್ ಎಂದು ಗುರುತಿಸಲಾಗಿದ್ದು, ಅವರು ಇಂಫಾಲ್ ಪಶ್ಚಿಮದ ತರುಂಗ್‌ನವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು ಶನಿವಾರ ಬೆಳಗ್ಗೆ 10 ಘಂಟೆ ಸುಮಾರಿಗೆ ಮೂವರು ಶಸ್ತ್ರಸಜ್ಜಿತ ವ್ಯಕ್ತಿಗಳು ರಜೆಯಲ್ಲಿದ್ದ ಸೆರ್ಟೊ ತಂಗ್‌ಥಾಂಗ್ ಕೋಮ್ ಅವರನ್ನು ಅವರ ಮನೆಯಿಂದ ಅಪಹರಿಸಿದ್ದಾರೆ. ಕೋಮ್​ ಅವರ ಮಗ ಹೇಳುವ ಪ್ರಕಾರ ಅವರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಪಹರಿಸಿದ್ದಾರೆ.

ಮೂವರು ವ್ಯಕ್ತಿಗಳು ಕೋಮ್​ ಅವರ ಹಣೆಯ ಮೇಲೆ ಬಂದೂಕನ್ನು ಇಟ್ಟು ಬಲವಂತೆವಾಗಿ ಅವರನ್ನು ಎಳೆದೊಯ್ದಿದ್ದಾರೆ. ಭಾನುವಾರ ಬೆಳಗ್ಗೆ 9:30ರ ಸುಮಾರಿಗೆ ಅವರ ಮೃತದೇಹವು ಇಂಫಾಲ್ ಪೂರ್ವ ಜಿಲ್ಲೆಯ ಖುನಿಂಗ್‌ಥೆಕ್ ಗ್ರಾಮದಲ್ಲಿ ಪತ್ತೆಯಾಗಿತ್ತು. ಹತ್ಯೆಯಾಗಿರುವ ವ್ಯಕ್ತಿ ಕೋಮ್​ ಎಂದು ಅವರ ಸಹೋದರ ಮತ್ತು ಅಳಿಯ ಗುರುತಿಸಿದ್ಧಾರೆ. ಅವರ ತೆಲೆಗೆ ಗುಂಡಿಟ್ಟು ಹತ್ಯೆ ಮಾಡಲಾಗಿದೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net