ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

Crime Logo
Published on

ಮೈಸೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಸೆನ್ ಠಾಣೆ ಪೊಲೀಸರು ಆತನಿಂದ 1.20 ಲಕ್ಷ ರೂ. ಮೌಲ್ಯದ 4 ಕೆ.ಜಿ. 130 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಗುಂಡ್ಲುಪೇಟೆಯಲ್ಲಿ ವಾಸಿಸುತ್ತಿರುವ ಕೇರಳ ಮೂಲದ ಅಕ್ಬರ್ ಪಾಷಾ ಬಂಧಿತ ಆರೋಪಿ. ಸೆ.25 ರಂದು ಸೆನ್ ಠಾಣೆ ಪೊಲಿಸರು ಗಸ್ತಿನಲ್ಲಿ ಇದ್ದ ವೇಳೆ ಗಾಯಿತ್ರಿಪುರಂ ಚರ್ಚ್ ಬಳಿ ಬ್ಯಾಗ್ ಹಿಡಿದು ನಿಂತಿದ್ದ ಅಕ್ಬರ್ ಪಾಷನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ವಿಷಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net