ಗಾಂಜಾ ಸಂಗ್ರಹಿಸಿದ್ದ ಆರೋಪಿಗಳ ಸೆರೆ

bhr gaanja
ಆರೋಪಿಗಳಿಂದ ವಶಪಡಿಸಿಕೊಂಡ ಗಾಂಜಾ.
Published on

ಬಾಳೆಹೊನ್ನೂರು: ಹೂವಿನಹಕ್ಲು ಗ್ರಾಮದಲ್ಲಿ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಜಾನ್ಸನ್ ಎಂಬ ಆರೋಪಿ ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಬಂಧಿತರಿಂದ ಅಂದಾಜು 20 ಸಾವಿರ ರೂ. ಮೌಲ್ಯದ 450 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾವನ್ನು ಬೇರೆ ವ್ಯಕ್ತಿಗಳಿಂದ ಖರೀದಿಸಿ ಸೇವನೆಗಾಗಿ ಕೊಂಡೊಯ್ಯುತ್ತಿರುವುದಾಗಿ ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಯಾರಿಂದ ಖರೀದಿಸಲಾಗಿದೆ ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪಿಎಸ್‌ಐ ವಿ.ಟಿ.ದಿಲೀಪ್‌ಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net