ಕಳವು ಆರೋಪಿಗಳ ಬಂಧನ

hos crime (2)
ಕಳವು ಆರೋಪಿಗಳಿಂದ ವಶಪಡಿಸಿಕೊಳ್ಳಲಾದ ಚಿನ್ನಾಭರಣ. ಪಿಎಸ್‌ಐ ಶಿವಾನಂದ ಕೆ., ಸಿಬ್ಬಂದಿ ಇದ್ದಾರೆ.
Published on

ಹೊಸನಗರ: ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಬಳೆ ಹಾಗೂ ಮಾಸ್ತಿಕಟ್ಟೆ ಪ್ರದೇಶದಲ್ಲಿ ಆ.21ರಂದು ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಕಳ್ಳರನ್ನು ಬಂಧಿಸಿದ್ದಾರೆ.

ಗದಗ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಹನುಮಂತ ತೊಳೆಯಪ್ಪ ಕುಂಚಿಕೊರವರ (26), ಮಂಜುನಾಥ ಬಿಸುಕಲ್ಲೊಡ್ಡರ (36) ಬಂಧಿತರು. 4 ಲಕ್ಷ ರೂ. ಮೌಲ್ಯದ 55 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ 70 ಸಾವಿರ ರೂ. ಮೌಲ್ಯದ ಸ್ಕೂಟಿ ವಶಪಡಿಸಿಕೊಳ್ಳಲಾಗಿದೆ.

ನಗರ ಹೋಬಳಿಯ ಕಬಳೆ ಗ್ರಾಮದ ರಿಚರ್ಡ್ ಡಿಸೋಜ ಹಾಗೂ ಮಾಸ್ತಿಕಟ್ಟೆ ಗ್ರಾಮದ ಶೇಷಾದ್ರಿ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಬೀಗ ಒಡೆದು ಗಾಡ್ರೇಜ್‌ನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದರು.

ರಿಚರ್ಡ್ ಡಿಸೋಜ ಅವರ ಮನೆಯಿಂದ 1.66 ಲಕ್ಷ ರೂ. ಮೌಲ್ಯದ 31 ಗ್ರಾಂ ಚಿನ್ನಾಭರಣ, 70 ಸಾವಿರ ರೂ. ನಗದು ಕಳ್ಳತನವಾಗಿತ್ತು. ಶೇಷಾದ್ರಿ ಅವರ ಮನೆಯಿಂದ 1.11 ಲಕ್ಷ ರೂ. ಮೌಲ್ಯದ 28 ಗ್ರಾಂ ಚಿನ್ನಾಭರಣ, 3 ಸಾವಿರ ರೂ.ಮೌಲ್ಯದ ಬೆಳ್ಳಿ ಆಭರಣ, 30 ಸಾವಿರ ರೂ. ನಗದು ಕಳವು ಮಾಡಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಹೊಸನಗರ ಸಿಪಿಐ ಗುರಣ್ಣ ಎಸ್. ಹೆಬ್ಬಾಳ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಪಿಎಸ್‌ಐ ಶಿವಾನಂದ ಕೆ. ನೇತೃತ್ವದಲ್ಲಿ ಪೊಲೀಸರು ಆ.24ರಂದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net