ಮಾರಕಾಸ್ತ್ರ ಹಿಡಿದು ಪುಂಡಾಟ ಮೆರೆದಿದ್ದವರ ಸೆರೆ

arrest
Published on

ಬೆಂಗಳೂರು: ಏರಿಯಾದಲ್ಲಿ ಹವಾ ಸೃಷ್ಟಿಸಲು ಗುಂಪಾಗಿ ಬೈಕ್‌ನಲ್ಲಿ ಓಡಾಡಿ ಮಾರಕಾಸ್ತ್ರ ಹಿಡಿದು ಪುಂಡಾಟ ನಡೆಸಿದ್ದ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಆರ್.ಟಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿ ಕುಶಾಲ್‌ನಗರದ ಮೊಹಮ್ಮದ್ ಫರಾನ್ ಮಲ್ಲಿಕ್(೧೯), ಅದಾನ್ ಶರೀಫ್(೧೮), ಅಬ್ದುಲ್ ರಿಯಾನ್(೧೯) ಹಾಗೂ ಅಕೇಲ್ ಭಾಷಾ(೧೮) ಬಂಧಿತರು. ಆರೋಪಿಗಳಿಂದ ಎರಡು ದ್ವಿಚಕ್ರವಾಹನಗಳು ಹಾಗೂ ಎರಡು ಮಾರಕಾಸ್ತ್ರ ಜಪ್ತಿ ಮಾಡಲಾಗಿದೆ. ಆರೋಪಿಗಳು ಭಾನುವಾರ ಸಂಜೆ ೫.೩೦ರ ಸುಮಾರಿಗೆ ಸುಲ್ತಾನ್ ಪಾಳ್ಯ ಮುಖ್ಯರಸ್ತೆಯಲ್ಲಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ದ್ವಿಚಕ್ರ ವಾಹನದಲ್ಲಿ ಓಡಾಡುತ್ತಾ ಜೋರಾಗಿ ಕೂಗಾಡುತ್ತಿದ್ದರು. ಈ ಸಂಬಂದ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ಏರಿಯಾದಲ್ಲಿ ಹವಾ ಸೃಷ್ಟಿಸಲು ಹಾಗೂ ಶೋಕಿಗಾಗಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಜಳಪಿಸುತ್ತಾ ಸಾರ್ವಜನಿಕರಲ್ಲಿ ಭಯ ಉಂಟು ಮಾಡುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಸಂಬಂಧ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net