ಮೂವರು ಸುಲಿಗೆಕೋರರ ಬಂಧನ

arrest-696x465-1.jpg
Published on

ಬೆಂಗಳೂರು: ದ್ವಿಚಕ್ರ ವಾಹನ ಸವಾರನನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಲ್ಕೆರೆ ನಿವಾಸಿ ಮುರುಗನ್(೩೩), ದೊಡ್ಡ ಬಾಣಸವಾಡಿ ನಿವಾಸಿ ಅನಿಲ್ ಕುಮಾರ್(೩೧) ಮತ್ತು ಕಲ್ಕೆರೆ ನಿವಾಸಿ ತೇಜಸ್(೨೫) ಬಂಧಿತರು. ಆರೋಪಿಗಳಿಂದ ಒಂದು ಮೊಬೈಲ್ ೆನ್, ವಾಚ್ ಹಾಗೂ ೩೭೦೦ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ ಸುಮಾರು ೭೦ ಸಾವಿರ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೂರುದಾರರು ಜು.೭ ರ ರಾತ್ರಿ ೧ ಗಂಟೆಯ ಸಮಯದಲ್ಲಿ ಸ್ನೇಹಿತನ ಜತೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಆರೋಪಿಗಳು ಅಡ್ಡಗಟ್ಟಿ ಅವರ ಬಳಿ ಇದ್ದ ಾಸ್ಟ್‌ಟ್ರಾಕ್ ವಾಚ್, ಮೊಬೈಲ್ ೆನ್ ಮತ್ತು ೆನ್ ೇ ಮೂಲಕ ೩೭೦೦ ರೂ. ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದರು. ಈ ಬಗ್ಗೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನನ್ವಯ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆ ನಡೆಸಿದ ಸಂದರ್ಭದಲ್ಲಿ ತಮ್ಮ ದುಶ್ಚಟಗಳನ್ನು ಪೂರೈಸಿಕೊಳ್ಳಲು ರಾತ್ರಿ ವೇಳೆ ರಸ್ತೆಯಲ್ಲಿ ಹೋಗುತ್ತಿದ್ದ ದಾರಿಹೋಕರನ್ನು ಅಡ್ಡಗಟ್ಟಿ ಅವರ ಬೆಲೆ ಬಾಳುವ ವಸ್ತುಗಳನ್ನು ಸುಲಿಗೆ ಮಾಡುತ್ತಿದ್ದುದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net