ಪಾಕ್ ಪರ ೋಷಣೆ ಕೂಗಿದ್ದ ಮೂವರ ಸೆರೆ: ಜನಕ್ರೋಶಕ್ಕೆ ಮಣಿದ ಸರ್ಕಾರ

arrested
Published on

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಡೆಗೂ ಜನಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ.
ಎ್ಎಸ್‌ಎಲ್ ವರದಿ ಆಧರಿಸಿ ಮೂವರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ನಿವಾಸಿ ಮೊಹಮ್ಮದ್ ಶಫಿ ನಾಶಿಪುಡಿ, ಆರ್.ಟಿ.ನಗರದ ನಿವಾಸಿ ಮುನಾವರ್, ದೆಹಲಿ ಮೂಲದ ಇಲ್ತಾಜ್ ಬಂಧಿತರು.
ಎ್ಎಸ್‌ಎಲ್ ವರದಿ, ಆಧರಿಸಿ ಸಾಂಧರ್ಬಿಕ ಸಾಕ್ಷ್ಯಧಾರಗಳು, ಸಾಕ್ಷಿಗಳ ಹೇಳಿಕೆ ಮತ್ತು ಲಭ್ಯ ಸಾಕ್ಷಾೃಧಾರಗಳನ್ನು ಆಧರಿಸಿ ಈ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎ್ಎಸ್‌ಎಲ್ ವರದಿಯಲ್ಲಿ ೯ ಸೆಕೆಂಡುಗಳ ಅಂತರದಲ್ಲಿ ಎರಡು ಬಾರಿ ಪಾಕ್ ಪರ ೋಷಣೆ ಕೂಗಿರುವುದು ಪತ್ತೆಯಾಗಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಮೂವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ದೇಶದ್ರೋಹ ಪ್ರಕರಣ ದಾಖಲಿಸಿ:
ಎ್ಎಸ್‌ಎಲ್ ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ ಎ್ಎಸ್‌ಎಲ್ ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ? ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ ಐಪಿಸಿಯ ಸೆಕ್ಷನ್ ೧೨೪ಎ ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರ ಜತೆಗೆ ೨೫ ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಈ ಇಡೀ ಪ್ರಕರಣ ಕಾಂಗ್ರೆಸ್ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನು ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net